ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಕರ್‌ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪ್ರೇಕ್ಷಕರಿಗೆ ಅವಕಾಶ

Last Updated 2 ಡಿಸೆಂಬರ್ 2020, 10:00 IST
ಅಕ್ಷರ ಗಾತ್ರ

ಲಾಸ್‌ ಏಂಜಲೀಸ್‌: ಮುಂದಿನ ವರ್ಷ ನಡೆಯಲಿರುವ ಆಸ್ಕರ್‌ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪ್ರೇಕ್ಷಕರಿಗೆ ಪ್ರವೇಶಾವಕಾಶ ನೀಡಲಾಗುವುದು ಎಂದು ಅಕಾಡೆಮಿ ಆಫ್‌ ಮೋಷನ್ ಆರ್ಟ್ಸ್‌ ಆ್ಯಂಡ್‌ ಸೈನ್ಸಸ್‌ (ಎಎಂಪಿಎಎಸ್‌) ಹಾಗೂ ಎಬಿಸಿ ಚಾನೆಲ್‌ನ ಪ್ರತಿನಿಧಿಯೊಬ್ಬರು ಹೇಳಿದ್ದಾರೆ.

ಕೋವಿಡ್‌–19 ಪಿಡುಗಿನ ಕಾರಣ, ಈ ಪ್ರತಿಷ್ಠಿತ ಪ್ರಶಸ್ತಿ ಸಮಾರಂಭವನ್ನು ಆನ್‌ಲೈನ್‌ ಮೂಲಕ ಆಯೋಜಿಸಲಾಗುತ್ತದೆ ಎಂಬ ವದಂತಿಗಳಿಗೆ ಈ ಮೂಲಕ ತೆರೆ ಎಳೆಯಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ನಿಗದಿತ ದಿನಾಂಕಕ್ಕಿಂತ ಎಂಟು ವಾರ ತಡವಾಗಿ ಅಂದರೆ, 2021ರ ಏಪ್ರಿಲ್‌ 25ರಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಪರಂಪರೆಯಂತೆ ಈ ಸಮಾರಂಭವು ಲಾಸ್‌ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯುವುದು. ಈ ಥಿಯೇಟರ್‌ನಲ್ಲಿ 3,400 ಜನರಿಗೆ ಆಸನ ವ್ಯವಸ್ಥೆ ಇದೆ. ಆದರೆ, ಕೋವಿಡ್‌–19 ಕಾರಣದಿಂದ ಈ ಬಾರಿಯ ಸಮಾರಂಭಕ್ಕೆ ಹಾಜರಾಗಲು ಎಷ್ಟು ಜನರಿಗೆ ಅವಕಾಶ ನೀಡಲಾಗುತ್ತದೆ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಇವೇ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT