ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್‌ನಲ್ಲಿ ಹೊಸ ಕೊರೊನಾ ವೈರಸ್‌, ಅದರ 1000 ಸೋಂಕು ಪ್ರಕರಣ ಪತ್ತೆ!

Last Updated 15 ಡಿಸೆಂಬರ್ 2020, 5:22 IST
ಅಕ್ಷರ ಗಾತ್ರ

ಲಂಡನ್‌: ಇಂಗ್ಲೆಂಡ್‌ನಲ್ಲಿ ಕೊರೊನಾ ವೈರಸ್‌ನ ಹೊಸ ಪ್ರಬೇಧವೊಂದು ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದ 1000ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಕಂಡು ಬಂದಿವೆ ಎಂದು ಆರೋಗ್ಯ ಸಚಿವ ಮ್ಯಾಟ್‌ ಹ್ಯಾನ್‌ಕಾಕ್‌ ಸೋಮವಾರ ತಿಳಿಸಿದ್ದಾರೆ.

ಇತ್ತೀಚೆಗೆ ಹೆಚ್ಚು ಕೋವಿಡ್‌ ಪ್ರಕರಣಗಳು ವರದಿಯಾಗುತ್ತಿರುವ ದೇಶದ ದಕ್ಷಿಣ ಭಾಗದಲ್ಲಿ ಈ ಹೊಸ ಮಾದರಿಯ ಕೊರೊನಾ ವೈರಸ್‌ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.

'ಹೊಸ ಕೊರೊನಾ ವೈರಸ್‌ ಅನ್ನು ನಾವು ಪತ್ತೆ ಮಾಡಿದ್ದೇವೆ. ದಕ್ಷಿಣ ಇಂಗ್ಲೆಂಡ್‌ನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸೋಂಕು ಪ್ರಕರಣಗಳಿಗೆ ಇದೇ ಕಾರಣ ಇರಬಹುದು,' ಎಂದಿದ್ದಾರೆ ಹ್ಯಾನ್‌ಕಾಕ್‌.

'ಸದ್ಯ ಈಗಿರುವ ಕೊರೊನಾ ವೈರಸ್‌ಗಿಂತಲೂ, ರೂಪಾಂತರಗೊಂಡಿರುವ ಈ ವೈರಸ್‌ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂಬುದು ನಮ್ಮ ಅಧ್ಯಯನಗಳಿಂದ ಗೊತ್ತಾಗಿದೆ,' ಎಂದು ಅವರು ತಿಳಿಸಿದರು.

'ಈ ಹೊಸ ಮಾದರಿಯ ಕೊರೊನಾ ವೈರಸ್‌ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸಬಹುದು ಎಂದು ಹೇಳಲು ಈ ಸಂದರ್ಭದಲ್ಲಿ ಸಾಧ್ಯವಿಲ್ಲ. ಇತ್ತೀಚಿನ ಕ್ಲಿನಿಕಲ್ ಟ್ರಯಲ್‌ಗಳಿಂದ ತಿಳಿದು ಬಂದಿರುವುದೇನೆಂದರೆ, ಈ ತಳಿಯು ಲಸಿಕೆಗೆ ಸ್ಪಂದಿಸದೇ ಇರುವುದು ಅಸಂಭವನೀಯ,' ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT