ಮಂಗಳವಾರ, ಅಕ್ಟೋಬರ್ 27, 2020
28 °C

ಬೆಲಾರಸ್‌ ಅಧ್ಯಕ್ಷರ ರಾಜೀನಾಮೆಗೆ ಆಗ್ರಹ: ಬೃಹತ್‌ ಪ್ರತಿಭಟನೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಕೈವ್: ಬೆಲಾರಸ್‌ ಅಧ್ಯಕ್ಷ ಅಲೆಕ್ಸಾಂಡರ್‌ ಲುಕಷೆಂಕೊ ರಾಜೀನಾಮೆಗೆ ಒತ್ತಾಯಿಸಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ರಾಜಧಾನಿ ಮಿನ್ಕ್ಸ್‌ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆಯಲ್ಲಿ ಅಕ್ರಮ ನಡೆಸಿ ಅಧ್ಯಕ್ಷರ ಹುದ್ದೆ ಅಲಂಕರಿಸಿರುವ ಅಲೆಕ್ಸಾಂಡರ್‌ ರಾಜೀನಾಮೆ ನೀಡಬೇಕು. ಅಲ್ಲದೇ ರಾಜಕೀಯ ಕೈದಿಗಳನ್ನು ಬಿಡುಗಡೆಗೊಳಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗ ಮಾಡಿದರು. ಆದರೆ ಪ್ರತಿಭಟನಕಾರರು ಮಾತ್ರ ಸ್ಥಳದಿಂದ ಚದುರಲಿಲ್ಲ.

ಕಳೆದ ಎರಡು ತಿಂಗಳಿನಿಂದ ಬೆಲಾರಸ್‌ನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.  ಅಲೆಕ್ಸಾಂಡರ್‌ ಇದುವರೆಗೆ ಆರು ಬಾರಿ ಅಧ್ಯಕ್ಷ ಹುದ್ದೆ ಅಲಂಕರಿಸಿದ್ದಾರೆ. ಆಗಸ್ಟ್‌ 9 ರಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಲೆಕ್ಸಾಂಡರ್ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ.

ಅಲೆಕ್ಸಾಂಡರ್ ಲುಕಷೆಂಕೊ ಅವರು ಚುನಾವಣೆಯಲ್ಲಿ ಶೇಕಡ 80 ರಷ್ಟು ಮತಗಳಿಂದ ಜಯ ಗಳಿಸಿದ್ದರು. ಪ್ರತಿಸ್ಪರ್ಧಿ ಸ್ವಿಟ್ಲಾನಾ ಸಿಖಾನೌಸ್ಕಯಾ ಅವರಿಗೆ ಕೇವಲ ಶೇಕಡ 10 ರಷ್ಟು ಮತಗಳು ದೊರೆತಿದ್ದವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು