ಮಂಗಳವಾರ, ಮಾರ್ಚ್ 21, 2023
29 °C

ಶ್ರೀಲಂಕಾದಲ್ಲಿ ಮಾದಕವಸ್ತು ಕಳ್ಳ ಸಾಗಣೆ: 200ಕ್ಕೂ ಹೆಚ್ಚು ಶಂಕಿತರ ಬಂಧನ

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಕೊಲಂಬೊ: ದೇಶದಲ್ಲಿ ಅಕ್ರಮವಾಗಿ ಮಾದಕವಸ್ತು ಸರಬರಾಜು ಮಾಡುತ್ತಿದ್ದ 200ಕ್ಕೂ ಹೆಚ್ಚು ಶಂಕಿತರನ್ನು ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಶ್ರೀಲಂಕಾ ಪೊಲೀಸರು ತಿಳಿಸಿದ್ದಾರೆ.

ಪೊಲೀಸರು, ವಿಶೇಷ ಕಮಾಂಡೋಗಳು ಮತ್ತು ವಾಯುಪಡೆ ಜಂಟಿಯಾಗಿ ದೇಶದ ಪಶ್ಚಿಮ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಹೆರಾಯಿನ್ ಮತ್ತು ಗಾಂಜಾ ಸೇರಿದಂತೆ ಹಲವು ಬಗೆಯ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವಕ್ತಾರ ನಿಹಾಲ್ ಥಲ್ದುವಾ ಮಾಹಿತಿ ನೀಡಿದ್ದಾರೆ.

ಉತ್ತರ ಜಾಫ್ನಾ ಪರ್ಯಾಯ ದ್ವೀಪದಲ್ಲಿ ಭಾರೀ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ‌ಸಮುದ್ರ ಮಾರ್ಗವಾಗಿ ಶ್ರೀಲಂಕಾಕ್ಕೆ ಮಾದಕವಸ್ತು ಕಳ್ಳಸಾಗಣೆ ಮಾಡಲಾಗುತ್ತಿದೆ. ಇದನ್ನು ತಡೆಯಲು ಪ್ರಯತ್ನಿಸುವುದಾಗಿ ನೌಕಾಪಡೆ ತಿಳಿಸಿದೆ.       

 ಇದನ್ನು ಓದಿ:      

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು