ಗುರುವಾರ , ಜನವರಿ 28, 2021
27 °C

Covid-19 World Updates| 6 ಕೋಟಿ ಮೀರಿದ ಸೋಂಕು ಪ್ರಕರಣಗಳು

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್:  ಅಮೆರಿಕದಲ್ಲಿ ಇದುವರೆಗೆ 1,31,58,303 ಪ್ರಕರಣಗಳು ದೃಢಪಟ್ಟಿದ್ದು, ಆ ಪೈಕಿ 2,68,523 ಮಂದಿ ಮೃತಪಟ್ಟಿದ್ದಾರೆ. ಅಮೆರಿಕದಲ್ಲಿ ಕಳೆದ 24 ಗಂಟೆಗಳಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಕೋವಿಡ್‌ ಸೋಂಕಿತರು ಮೃತಪಟ್ಟಿದ್ದಾರೆ.

ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ದತ್ತಾಂಶ ಪ್ರಕಾರ ಬುಧವಾರ ಒಂದೇ ದಿನ 2,400ಕ್ಕೂ ಹೆಚ್ಚು ಸೋಂಕಿತರು ಸಾವಿಗೀಡಾಗಿದ್ದಾರೆ. ಕಳೆದ 6 ತಿಂಗಳಲ್ಲಿ ಒಂದೇ ದಿನ ದಾಖಲಾದ ಅಧಿಕ ಸಾವಿನ ಪ್ರಮಾಣ ಇದಾಗಿದೆ.

ಇತ್ತೀಚಿನ ದಿನಗಳಲ್ಲಿ ಜನರು ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ವಿಶ್ವದಾದ್ಯಂತ 6 ಕೋಟಿಗೂ ಮೀರಿದ ( 6,10,12,676) ಪ್ರಕರಣಗಳು ದಾಖಲಾಗಿದ್ದು, 14,32,613 ಮಂದಿ ಮೃತಪಟ್ಟಿದ್ದಾರೆ. ಜೊತೆಗೆ 4,22,59,632  ಮಂದಿ ಸೋಂಕಿತರು ಗುಣಮುಖರಾಗಿದ್ದು, ಸದ್ಯ 1,73,20,431 ಸಕ್ರಿಯ ಪ್ರಕರಣಗಳು ಇವೆ.

ಭಾರತದಲ್ಲಿ 92,91,068 ಪ್ರಕರಣ ದಾಖಲಾಗಿದ್ದು, ಆ ಪೈಕಿ 1,35,533 ಮಂದಿ ಸಾವಿಗೀಡಾಗಿದ್ದಾರೆ.

ಬ್ರೆಜಿಲ್‌ನಲ್ಲಿ 61,70,827 ಪ್ರಕರಣಗಳು ಪತ್ತೆಯಾಗಿದ್ದು, 1,70,832 ಮಂದಿ ಮೃತಪಟ್ಟಿದ್ದಾರೆ. ಸದ್ಯ 4,87,148 ಸಕ್ರಿಯ ಪ್ರಕರಣಗಳು ಇವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು