ಶುಕ್ರವಾರ, ಆಗಸ್ಟ್ 6, 2021
27 °C

ಕೋವಿಡ್‌: ಪಾಕಿಸ್ತಾನದಲ್ಲಿ ಕಾಲಿಟ್ಟಿತೇ ನಾಲ್ಕನೇ ಅಲೆ?

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಕಳೆದ ಮೂರು ವಾರಗಳಿಂದ ಕೋವಿಡ್‌ ಪ್ರಕರಣಗಳು ಮೂರು ಪಟ್ಟು ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ನಾಲ್ಕನೇ ಅಲೆಯ ವಿರುದ್ಧ ಹೋರಾಡಲು ಪಾಕಿಸ್ತಾನ ಸಿದ್ಧತೆ ನಡೆಸುತ್ತಿದೆ.

‘ದೇಶದಲ್ಲಿ ಎಲ್ಲಾ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಚಟುವಟಿಕೆಗಳು ಆರಂಭಗೊಂಡಿದೆ. ಇದುವೇ ಸೋಂಕು ಪ್ರಸರಣಗೊಳ್ಳಲು ಕಾರಣ. ಸರ್ಕಾರ ಮತ್ತೆ ಲಾಕ್‌ಡೌನ್‌ ಘೋಷಿಸಬೇಕು. ಈದುಲ್‌ ಅಜ್ಹಾವನ್ನು ಆರೋಗ್ಯ ಸಂಬಂಧಿತ ನಿರ್ಬಂಧಗಳೊಂದಿಗೆ ಸರಳವಾಗಿ ಆಚರಿಸಬೇಕು’ ಎಂದು ಆರೋಗ್ಯ ತಜ್ಞರು ಒತ್ತಾಯಿಸಿದ್ದಾರೆ.

‘ಕಳೆದ 24 ಗಂಟೆಗಳಲ್ಲಿ 1,980 ಹೊಸ ಪ್ರಕರಣಗಳು ವರದಿಯಾಗಿದ್ದು, ದೇಶದ ಸೋಂಕು ದೃಢ ಪ್ರಮಾಣವು ಶೇಕಡ 4.09 ರಷ್ಟಿದೆ’ ಎಂದು ಅಧಿಕಾರಿಗಳು ಭಾನುವಾರ ಹೇಳಿದರು.

‘ಮೇ 30ರ ಬಳಿಕ ಮೊದಲ ಬಾರಿ ಸೋಂಕು ದೃಢ ಪ್ರಮಾಣವು ಶೇಕಡ 4ಕ್ಕಿಂತ ಹೆಚ್ಚಿದೆ. ದೇಶದಲ್ಲಿ ಒಟ್ಟು 9,73,284 ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 27 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ಧಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 22,582ಕ್ಕೆ ಏರಿಕೆಯಾಗಿದೆ’ ಎಂದು ರಾಷ್ಟ್ರೀಯ ಆರೋಗ್ಯ ಸೇವೆಗಳ ಸಚಿವಾಲಯ ತಿಳಿಸಿದೆ.

‘9,13,203 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, 2,119 ರೋಗಿಗಳ ಪರಿಸ್ಥಿತಿ ಗಂಭೀರವಾಗಿದೆ’ ಎಂದು ಸಚಿವಾಲಯ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು