ಶನಿವಾರ, ಅಕ್ಟೋಬರ್ 24, 2020
27 °C
ಇಸ್ಲಾಮಾಬಾದ್‌ ಹೈಕೋರ್ಟ್‌ ಆದೇಶ

ನ.24ರ ಒಳಗೆ ಹಾಜರಾಗದಿದ್ದರೆ ಘೋಷಿತ ಅಪರಾಧಿ: ಷರೀಫ್‌ಗೆ ಎಚ್ಚರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ನವೆಂಬರ್‌ 24ರ ಒಳಗೆ ನ್ಯಾಯಾಲಯದ ಮುಂದೆ ಹಾಜರಾಗದಿದ್ದರೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರನ್ನು ಘೋಷಿತ ಅಪರಾಧಿ ಎಂದು ಆದೇಶ ಹೊರಡಿಸಲಾಗುವುದು ಇಸ್ಲಾಮಾಬಾದ್‌ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಅಲ್‌ ಅಜೀಜಿಯಾ ಸ್ಟೀಲ್‌ ಮಿಲ್‌ ಮತ್ತು ಅವೆನ್‌ಫೀಲ್ಡ್ ಪ್ರಕರಣ ಸಂಬಂಧ ನವಾಜ್‌ ಷರೀಫ್‌ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

‘ನ್ಯಾಯಾಲಯವು ಷರೀಫ್‌ ವಿರುದ್ದ ಜಾರಿಗೊಳಿಸಿರುವ ಜಾಮೀನು ರಹಿತ ವಾರಂಟ್ ಅನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಎಲ್ಲಾ ಯತ್ನಗಳನ್ನು ಮಾಡಲಾಗುತ್ತಿದೆ’ ಎಂದು ಹೈಕಮಿಷನ್‌ ಕಚೇರಿಯ ರಾಜತಾಂತ್ರಿಕ ಅಧಿಕಾರಿಗಳು ಅಕ್ಟೋಬರ್‌ 7ರಂದು ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದರು.

ಘೋಷಿತ ಅಪರಾಧಿ ಎಂದು ಆದೇಶ ಹೊರಡಿಸಿದರೆ ಷರೀಫ್‌ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.

ಕಳೆದ ವರ್ಷ ನವೆಂಬರ್‌ನಿಂದ ಷರೀಫ್‌ ಅವರು ಲಂಡನ್‌ನಲ್ಲಿ ವಾಸಿಸುತ್ತಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ಎಂಟು ವಾರಗಳ ಕಾಲ ಲಂಡನ್‌ಗೆ ತೆರಳಲು ನ್ಯಾಯಾಲಯ ಮತ್ತು ಸರ್ಕಾರ ಅನುಮತಿ ನೀಡಿತ್ತು. ಆದರೆ, ಅವರು ಹಿಂತಿರುಗಲಿಲ್ಲ.

ಷರೀಫ್‌ ಅವರು ಗುಣಮುಖರಾಗುತ್ತಿದ್ದಾರೆ ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು