ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದನೆ ಪ್ರಕರಣ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಮಧ್ಯಂತರ ಜಾಮೀನು

Last Updated 25 ಆಗಸ್ಟ್ 2022, 11:05 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಇಲ್ಲಿನ ಭಯೋತ್ಪಾದನೆ ನಿಗ್ರಹ ನ್ಯಾಯಾಲಯವು ಸೆಪ್ಟೆಂಬರ್‌ 1ರವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪಾಕಿಸ್ತಾನ ತೆಹ್ರೀಕ್‌–ಎ–ಇನ್ಸಾಫ್‌ (ಪಿಟಿಐ) ಪಕ್ಷದ ಮುಖ್ಯಸ್ಥರೂ ಆಗಿರುವ ಇಮ್ರಾನ್‌ ಅವರುಹೋದ ವಾರ ನಡೆದಿದ್ದ ರ‍್ಯಾಲಿ ವೇಳೆ ಪೊಲೀಸ್‌, ನ್ಯಾಯಾಂಗ ಮತ್ತು ಸರ್ಕಾರದ ಇತರ ಸಂಸ್ಥೆಗಳಿಗೆ ಬೆದರಿಕೆಯೊಡ್ಡಿದ್ದ ಆರೋಪ ಎದುರಿಸುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಭಯೋತ್ಪಾದನೆ ಪ್ರಕರಣ ದಾಖಲಿಸಲಾಗಿತ್ತು.

ಪೊಲೀಸರು ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ತಮ್ಮ ವಿರುದ್ಧ ಭಯೋತ್ಪಾದನೆ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ತಮಗೆ ಜಾಮೀನು ನೀಡಬೇಕು ಎಂದು ಇಮ್ರಾನ್‌ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ನ್ಯಾಯಮೂರ್ತಿ ರಾಜಾ ಜವಾದ್‌ ಅಬ್ಬಾಸ್‌ ಹಸನ್‌ ಅವರು 1 ಲಕ್ಷ ರೂಪಾಯಿ ಭದ್ರತೆ ಮೇಲೆ ಜಾಮೀನು ಮಂಜೂರು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT