ಇಸ್ಲಾಮಾಬಾದ್ (ಪಿಟಿಐ): ತೋಶಖಾನಾದ ಅಮೂಲ್ಯ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಿ ಬಳಿಕ ಲಾಭ ಗಳಿಸಲು ಮಾರಾಟ ಮಾಡಿದ ಹಾಗೂ ಮಹಿಳಾ ನ್ಯಾಯಾಧೀಶರೊಬ್ಬರಿಗೆ ಬೆದರಿಕೆ ಹಾಕಿದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಎರಡು ನ್ಯಾಯಾಲಯಗಳು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಸೋಮವಾರ ಜಾಮೀನುರಹಿತ ಬಂಧನ ವಾರೆಂಟ್ ಹೊರಡಿಸಿವೆ.
ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಮ್ರಾನ್ ಖಾನ್ ಅವರು ಸೋಮವಾರ ನ್ಯಾಯಾಲಯಗಳ ಮುಂದೆ ಹಾಜರಾಗಬೇಕಿತ್ತು. ಆದರೆ ಅವರು ಗೈರಾದ ಹಿನ್ನೆಲೆಯಲ್ಲಿ ಇದೇ 18 ಮತ್ತು 21ರಂದು ತಮ್ಮ ಮುಂದೆ ಹಾಜರುಪಡಿಸಬೇಕು ಎಂದು ಇಬ್ಬರು ಜಿಲ್ಲಾ ನ್ಯಾಯಾಧೀಶರು ಇಲ್ಲಿ ಪೊಲೀಸರಿಗೆ ಆದೇಶ ನೀಡಿದರು.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಾಫರ್ ಇಕ್ಬಾಲ್ ಅವರು ತೋಶಖಾನ ಪ್ರಕರಣದ ವಿಚಾರಣೆ ನಡೆಸಿದರೆ, ಹಿರಿಯ ಸಿವಿಲ್ ನ್ಯಾಯಾಧೀಶ ರಾಣಾ ಮುಜಾಹಿದ್ ರಹೀಂ ಅವರು ನ್ಯಾಯಾಧೀಶೆಗೆ ಬೆದರಿಕೆ ಪ್ರಕರಣವನ್ನು ವಿಚಾರಣೆ ನಡೆಸಿ ಈ ಆದೇಶ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.