ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೊಶಖಾನ ಪ್ರಕರಣ: ಇಮ್ರಾನ್‌ ಖಾನ್‌ಗೆ ಜಾಮೀನು ರಹಿತ ಬಂಧನ ವಾರಂಟ್

Last Updated 28 ಫೆಬ್ರುವರಿ 2023, 13:50 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ತೊಶಖಾನ ಪ್ರಕರಣದಲ್ಲಿ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಪಾಕಿಸ್ತಾನ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಗೊಳಿಸಿದೆ. ಆದರೆ, ಇತರೆ ಎರಡು ಪ್ರಕರಣಗಳಲ್ಲಿ ಅವರಿಗೆ ಜಾಮೀನು ನೀಡಲಾಗಿದೆ.

ನ್ಯಾಯಾಲಯದ ಆವರಣದ ಹೊರಗೆ ಅವರ ನೂರಾರು ಬೆಂಬಲಿಗರು ತಮ್ಮ ನಾಯಕನನ್ನು ಬೆಂಬಲಿಸಲು ಜಮಾಯಿಸಿದ್ದರು.

ಮೂರು ಪ್ರಕರಣಗಳಲ್ಲಿ ಹಾಜರಾಗುವ ಸಲುವಾಗಿ ಪಾಕಿಸ್ತಾನ ತೆಹ್ರೀಕ್‌–ಎ– ಇನ್ಸಾಫ್‌ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಲಾಹೋರ್‌ನ ತಮ್ಮ ಜಮಾನ್ ಪಾರ್ಕ್ ನಿವಾಸದಿಂದ ಇಸ್ಲಾಮಾಬಾದ್‌ಗೆ ಬಂದರು.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಜಾಫರ್ ಇಕ್ಬಾಲ್ ಅವರು ಇಮ್ರಾನ್ ವಿರುದ್ಧ ಜಾಮೀನು ರಹಿತ ವಾರಂಟ್‌ ಆದೇಶ ಹೊರಡಿಸಿ, ಸತತ ಗೈರು ಹಾಜರಿ ಕಾರಣಕ್ಕೆ ಮಾರ್ಚ್‌ 7ಕ್ಕೆ ವಿಚಾರಣೆಯನ್ನು ಮುಂದೂಡಿದರು.

ಇದಕ್ಕೂ ಮುನ್ನ ವಿಚಾರಣೆಯನ್ನು ಎರಡು ಬಾರಿ ಮುಂದೂಡಲಾಗಿತ್ತು.

2018 ಮತ್ತು 2019ರ ಅವಧಿಯಲ್ಲಿ ಅವರು ತಮ್ಮ ಬಳಿಯೇ ಇರಿಸಿಕೊಂಡಿದ್ದ ತೊಶಖಾನ ಉಡುಗೊರೆಗಳ ಒಟ್ಟು ಮೌಲ್ಯದ ಕುರಿತ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ.

ಪಾಕಿಸ್ತಾನದ ಆಡಳಿತಗಾರರು, ಸಂಸತ್‌ ಸದಸ್ಯರು, ಅಧಿಕಾರಿಗಳು ಪಡೆಯುವ ಉಡುಗೊರೆಗಳನ್ನು ಸಂಗ್ರಹಿಸಿಡುವ ಇಲಾಖೆಯನ್ನು ತೊಶಖಾನ ಎಂದು ಕರೆಯಲಾಗುತ್ತದೆ. ಇದು ಸಂಸದೀಯ ವಿಭಾಗದ ಆಡಳಿತದ ನಿಯಂತ್ರಣದಲ್ಲಿ ಇರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT