ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಮ್ರಾನ್‌ ಖಾನ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Last Updated 29 ಮಾರ್ಚ್ 2023, 12:35 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌ (ಪಿಟಿಐ): ನ್ಯಾಯಾಧೀಶೆಯೊಬ್ಬರಿಗೆ ಬೆದರಿಕೆ ಒಡ್ಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ವಿರುದ್ಧ ಇಲ್ಲಿನ ನ್ಯಾಯಾಲಯವು ಬುಧವಾರ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿದೆ.

ಕೋರ್ಟ್‌ಗೆ ಖುದ್ದು ಹಾಜರಾಗುವುದರಿಂದ ವಿನಾಯಿತಿ ಹಾಗೂ ಮಾರ್ಚ್ 30 ರಂದು ಹಾಜರಾಗಲು ಅವಕಾಶ ನೀಡುವಂತೆ ಖಾನ್ ಪರ ವಕೀಲ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಧೀಶ ಮಲಿಕ್ ಅಮನ್ ತಿರಸ್ಕರಿಸಿದರು.

ಇಮ್ರಾನ್‌ ಖಾನ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿದ ನ್ಯಾಯಾಧೀಶ ಅಮನ್, ಏ. 18ರಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಳೆದ ವರ್ಷ ಆಗಸ್ಟ್‌ನಲ್ಲಿ ನಡೆದ ರ‍್ಯಾಲಿಯೊಂದರಲ್ಲಿ ಮಾತನಾಡಿದ್ದ ಇಮ್ರಾನ್‌ ಖಾನ್‌, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಝೆಬಾ ಚೌಧರಿ ಹಾಗೂ ಇಸ್ಲಾಮಾಬಾದ್ ಪೊಲೀಸ್ ಅಧಿಕಾರಿಗಳ ವಿರುದ್ಧ ಬೆದರಿಕೆ ಒಡ್ಡುವ ಭಾಷೆ ಬಳಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT