ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದನಾ ದಾಳಿ ಸಾಧ್ಯತೆ: ಪಾಕ್‌ನಲ್ಲಿ ಕಟ್ಟೆಚ್ಚರ

Last Updated 6 ಅಕ್ಟೋಬರ್ 2022, 11:28 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ‘ತೆಹ್ರೀಕ್‌–ಐ–ತಾಲಿಬಾನ್‌ ಪಾಕಿಸ್ತಾನ (ಟಿಟಿಪಿ) ಸಂಘಟನೆಯು ದೇಶದಲ್ಲಿ ಭಯೋತ್ಪಾದನಾ ಕೃತ್ಯ ನಡೆಸುವ ಸಾಧ್ಯತೆ ಇರುವುದರಿಂದ ಪಾಕಿಸ್ತಾನ ಸರ್ಕಾರವು ದೇಶದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ’ ಎಂದು ಮಾಧ್ಯಮವೊಂದು ಗುರುವಾರ ವರದಿ ಮಾಡಿದೆ.

ಟಿಟಿಪಿ ಕಮಾಂಡರ್‌ಗಳಾದ ಓಮರ್‌ ಖಾಲಿದ್‌ ಖೊರಾಸನಿ ಮತ್ತು ಅಫ್ತಾಬ್‌ ಪಾರ್ಕೆ ಅವರ ಹತ್ಯೆ ನಂತರ ಟಿಟಿಪಿ ಹೈಕಮಾಂಡ್‌ ಅಫ್ಗಾನಿಸ್ತಾನದ ಪಕ್ತಿಕಾದಲ್ಲಿ ಪಾಕಿಸ್ತಾನ ಸರ್ಕಾರದೊಂದಿಗೆ ಶಾಂತಿ ಮಾತುಕತೆ ಸಭೆ ನಡೆಸಿತ್ತು. ಇದು ಫಲಪ್ರದವಾಗಿರಲಿಲ್ಲ.

ಇದರ ಬೆನ್ನಲ್ಲೇ ನಾಲ್ಕು ಪ್ರಾಂತ್ಯಗಳ ಆಡಳಿತಕ್ಕೆ ಪತ್ರ ಬರೆದಿರುವ ಪಾಕಿಸ್ತಾನ ಸರ್ಕಾರವು ಬಿಗಿ ಭದ್ರತೆ ಕೈಗೊಳ್ಳುವುದರ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಎಲ್ಲಾ ಸ್ಥಳಗಳ ಮೇಲೆ ಕಣ್ಗಾವಲು ಇಡುವಂತೆ ಸೂಚಿಸಿದೆ.

‘ಪಾಕಿಸ್ತಾನ ಸರ್ಕಾರವು ಟಿಟಿಪಿಯ ಮುಖ್ಯ ಬೇಡಿಕೆಯೊಂದನ್ನು ತಿರಸ್ಕರಿಸಿತ್ತು. ಇದು ಟಿಟಿಪಿ ಮುಖಂಡರ ಕೋಪಕ್ಕೆ ಕಾರಣವಾಗಿದ್ದು ಆ ಸಂಘಟನೆಯು ದೇಶದಲ್ಲಿ ಭಯೋತ್ಪಾದನೆ ಕೃತ್ಯಗಳನ್ನು ನಡೆಸುವ ಸಾಧ್ಯತೆ ಇದೆ. ಹೀಗಾಗಿ ಕಟ್ಟೆಚ್ಚರ ವಹಿಸುವಂತೆ ಪಾಕಿಸ್ತಾನದ ಆಂತರಿಕ ಸಚಿವಾಲಯವು ಎಲ್ಲಾ ಪ್ರಾಂತ್ಯಗಳ ಗೃಹ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ ಹೋದ ತಿಂಗಳು ಪತ್ರ ಬರೆದಿದೆ’ ಎಂದು ಡಾನ್‌ ಪತ್ರಿಕೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT