ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಾಜ್‌ ಷರೀಫ್‌ ಬಂಧನಕ್ಕೆ ವಾರಂಟ್‌ ಹೊರಡಿಸಿದ ಪಾಕ್‌ ಸರ್ಕಾರ

Last Updated 18 ಸೆಪ್ಟೆಂಬರ್ 2020, 9:05 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಅಕ್ರಮ ಭೂ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪದಚ್ಯುತ ಪ್ರಧಾನಿ ನವಾಜ್‌ ಷರೀಫ್‌ ಬಂಧನಕ್ಕೆ ಪಾಕಿಸ್ತಾನ ಸರ್ಕಾರವು ವಾರಂಟ್‌ ಹೊರಡಿಸಿದೆ.

70 ವರ್ಷ ವಯಸ್ಸಿನ ಷರೀಫ್‌, ಸದ್ಯ ಲಂಡನ್‌ನಲ್ಲಿ ನೆಲೆಸಿದ್ದಾರೆ.ವಿದೇಶದಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಷರೀಫ್‌ ಮಾಡಿಕೊಂಡಿದ್ದ ಮನವಿಯನ್ನು ಲಾಹೋರ್‌ ಹೈಕೋರ್ಟ್‌ ಪುರಸ್ಕರಿಸಿತ್ತು. ನಾಲ್ಕು ವಾರಗಳ ಕಾಲ ವಿದೇಶದಲ್ಲಿರಲು ಅನುಮತಿ ಲಭಿಸಿದ್ದರಿಂದ ಕಳೆದ ವರ್ಷದ ನವೆಂಬರ್‌ನಲ್ಲಿ ಷರೀಫ್‌, ಲಂಡನ್‌ಗೆ ಪ್ರಯಾಣ ಬೆಳೆಸಿದ್ದರು.

ನವಾಜ್‌, ಅವರ ಪುತ್ರಿ ಮರಿಯಂ ಹಾಗೂ ಅಳಿಯ ಮಹಮ್ಮದ್‌ ಸಫ್ದಾರ್‌ ಅವರು ಅಕ್ರಮ ಭೂ ಹಂಚಿಕೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.

ಅಲ್‌ ಅಜಿಜಿಯಾ ಸ್ಟೀಲ್‌ ಮಿಲ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆಡಿಸೆಂಬರ್‌ 2018ರಂದು ಷರೀಫ್‌ಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಎರಡೂ ಪ್ರಕರಣಗಳಲ್ಲಿಯೂ ಅವರಿಗೆ ಜಾಮೀನು ಲಭಿಸಿತ್ತು.

‘ತವರಿಗೆ ಮರಳಲು ಷರೀಫ್‌ಗೆ ಎಂಟು ವಾರಗಳ ಗಡುವು ನೀಡಲಾಗಿತ್ತು. ಆರೋಗ್ಯ ಹದಗೆಟ್ಟಿರುವುದರಿಂದ ಅವರು ಇನ್ನೂ ಹಿಂತಿರುಗಿಲ್ಲ’ ಎಂದು ಷರೀಫ್‌ ಪರ ವಕೀಲರು ಹೇಳಿದ್ದಾರೆ.

‘ಷರೀಫ್‌ ಬಂಧನಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಸರ್ಕಾರವು ಹೊರಡಿಸಿರುವ ವಾರಂಟ್,‌ ಲಂಡನ್‌ನಲ್ಲಿರುವ ಪಾಕಿಸ್ತಾನ ಹೈ ಕಮಿಷನ್‌ಗೆ ಗುರುವಾರವೇ ತಲುಪಿದೆ. ಈ ಬೆಳವಣಿಗೆಯ ಕುರಿತು ಹೈ ಕಮಿಷನ್‌ ಯಾವುದೇ ಅಧಿಕೃತ ಹೇಳಿಕೆಯನ್ನೂ ನೀಡಿಲ್ಲ’ ಎಂದು ದಿ ಡಾನ್‌ ದಿನಪತ್ರಿಕೆ ವರದಿ ಮಾಡಿದೆ.

‘ಕಾನೂನು ಪ್ರಕಾರವೇ ಷರೀಫ್‌ ಅವರನ್ನು ವಶಕ್ಕೆ ಪಡೆಯಲಾಗುತ್ತದೆ’ ಎಂದು ಮೂಲಗಳು ತಿಳಿಸಿವೆ.

ಎರಡೂ ಪ್ರಕರಣಗಳಿಗೆ ಸಂಬಂಧಿಸಿದ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ಕೋರಿ ಈ ವಾರದ ಆರಂಭದಲ್ಲಿ ಷರೀಫ್‌ ಅರ್ಜಿ ಸಲ್ಲಿಸಿದ್ದರು. ಇದನ್ನು ಇಸ್ಲಾಮಾಬಾದ್‌ ಹೈಕೋರ್ಟ್‌ (ಐಎಚ್‌ಸಿ) ವಜಾಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT