ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ ನಂತರ ಚುನಾವಣೆಗೆ ಹೋಗಿ: ಪಾಕ್‌ ಒಳಾಡಳಿತ ಸಚಿವರ ಸಲಹೆ 

Last Updated 26 ಮಾರ್ಚ್ 2022, 19:45 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಈ ವರ್ಷದ ಬಜೆಟ್‌ ಮಂಡಿಸಿದ ಬಳಿಕ ಚುನಾವಣೆಗೆ ಹೋಗುವಂತೆ ಪಾಕ್‌ನ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಅಲ್ಲಿನ ಒಳಾಡಳಿತ ಸಚಿವ ಶೇಖ್‌ ರಷೀದ್‌ ಸಲಹೆ ನಿಡಿದ್ದಾರೆ.

ಇದು ನನ್ನ ವೈಯಕ್ತಿಕ ಅಭಿಪ್ರಾಯವೇ ಹೊರತು ಆಡಳಿತಾರೂಢ ಪಾಕಿಸ್ತಾನ್‌ ತಹ್ರೀಕ್‌–ಇ–ಇನ್ಸಾಫ್‌ (ಪಿಟಿಐ) ಪಕ್ಷದ ಅಭಿಪ್ರಾಯವಲ್ಲ ಎಂದೂ ಅವರು ಹೇಳಿದ್ದಾರೆ.

ಪ್ರಧಾನಿ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್‌ ನೀಡಿದ ನಂತರದಿಂದ ದೇಶದಲ್ಲಿ ಪ್ರಧಾನಿ ಅವರ ಜನಪ್ರಿಯತೆ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ಪ್ರತಿ ವರ್ಷ ಜೂನ್‌ 30ರಂದು ಬಜೆಟ್ ಮಂಡಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT