ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಪೊಲಿಯೋ ಅಭಿಯಾನಕ್ಕೆ ಚಾಲನೆ 4.3 ಕೋಟಿ ಮಕ್ಕಳಿಗೆ ಲಸಿಕೆ ನೀಡುವ ಗುರಿ

Last Updated 23 ಮೇ 2022, 13:55 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದಲ್ಲಿ ಮತ್ತೆ ಪೋಲಿಯೊ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ, ರಾಷ್ಟ್ರವ್ಯಾಪಿ ಪೋಲಿಯೊ ಅಭಿಯಾನಕ್ಕೆ ಪ್ರಧಾನಿ ಶೆಹಬಾಝ್ ಷರೀಫ್ ಸೋಮವಾರ ಚಾಲನೆ ನೀಡಿದ್ದಾರೆ. 4.3 ಕೋಟಿ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವ ಗುರಿ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಮೇ 23 ರಿಂದ 27ರವರೆಗೂ ಪೋಲಿಯೊ ಅಭಿಯಾನ ನಡೆಸಲಾಗುತ್ತಿದ್ದು, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಬೇಕು ಎಂದು ನಿರ್ದೇಶನ ನೀಡಿದರು. ರಾಷ್ಟ್ರವ್ಯಾಪಿ 3.40 ಲಕ್ಷ ಆರೋಗ್ಯ ಇಲಾಖೆ ಮುಂಚೂಣಿ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ದೇಶದ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಲಸಿಕೆ ವಿತರಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT