ಶುಕ್ರವಾರ, ಅಕ್ಟೋಬರ್ 30, 2020
24 °C

ಕೋವಿಡ್‌: ಆರು ತಿಂಗಳ ಬಳಿಕ ಪಾಕಿಸ್ತಾನದಲ್ಲಿ ಶಾಲೆಗಳು ಪುನರಾರಂಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಕೋವಿಡ್ ಸಾಂಕ್ರಾಮಿಕ ಪಿಡುಗಿ‌ನಿಂದಾಗಿ ಆರು ತಿಂಗಳಿಂದ ಮುಚ್ಚಿದ ಎಲ್ಲ ಶಾಲಾ–ಕಾಲೇಜುಗಳು ಬುಧವಾರದಿಂದ ಪಾಕಿಸ್ತಾನದಲ್ಲಿ ಪುನರಾರಂಭವಾಗಿವೆ.

ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶಗದಿಂದ ಸರ್ಕಾರ ಕೆಲವು ನಿರ್ಬಂಧಗಳನ್ನು ವಿಧಿಸಿದ್ದು, ಎಲ್ಲ ಶಾಲಾ – ಕಾಲೇಜುಗಳು ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

ಶಾಲೆಗಳನ್ನು ಮುಚ್ಚಿದ್ದರಿಂದ ಬಹಳಷ್ಟು ತೊಂದರೆಯಾಗಿತ್ತು. ಈಗ ಅಧಿಕ ಸಂಖ್ಯೆಯಲ್ಲಿ ಮಕ್ಕಳು ದಾಖಲಾಗುವ ವಿಶ್ವಾಸವಿದೆ. ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಿದ ಬಳಿಕವೇ ಶೈಕ್ಷಣಿಕ ಸಂಸ್ಥೆಗಳನ್ನು ಪುನರಾರಂಭಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಶಿಕ್ಷಣ ಸಚಿವ ಶಫ್ಕತ್ ಮಹಮೂದ್ ಹೇಳಿದ್ದಾರೆ.

ಸೆಪ್ಟೆಂಬರ್‌ 15ರಿಂದ ಮೊದಲ ಹಂತದಲ್ಲಿ ಕೆಲವು ಶಿಕ್ಷಣ ಸಂಸ್ಥೆಗಳು ಆರಂಭವಾಗಿದ್ದವು. ಆ ಬಳಿಕ ಪತ್ತೆಯಾದ ಕೊರೊನಾ ಸೋಂಕು ಪ್ರಕರಣಗಳ ಪೈಕಿ ಶೇಕಡ ಒಂದರಷ್ಟು ಮಾತ್ರ ಶಿಕ್ಷಣ ಸಂಸ್ಥೆಗಳಲ್ಲಿ ಇದ್ದವರಲ್ಲಿ ಕಾಣಿಸಿಕೊಂಡಿವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೇ ಪ್ರಾಥಮಿಕ ಶಾಲೆಗಳನ್ನೂ ಆರಂಭಿಸಲು ತೀರ್ಮಾನಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು