ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಸಂಸತ್ ಅಧಿವೇಶನ ಭಾನುವಾರದವರೆಗೆ ಮುಂದೂಡಿಕೆ

ಪ್ರಧಾನಿ ಇಮ್ರಾನ್ ಅವಿಶ್ವಾಸದ ಮತದಾನಕ್ಕೆ ಅವಕಾಶ ಕೋರಿ ಒತ್ತಾಯದ ಹಿನ್ನೆಲೆ
Last Updated 31 ಮಾರ್ಚ್ 2022, 13:51 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್‌ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ಗುರುವಾರ ಸೇರಿದ್ದ ಪಾಕಿಸ್ತಾನದ ನ್ಯಾಷನಲ್‌ ಅಸೆಂಬ್ಲಿ ಅಧಿವೇಶನವನ್ನು ದಿಢೀರ್‌ ಭಾನುವಾರಕ್ಕೆ ಮುಂದೂಡಲಾಗಿದೆ.

ಇಮ್ರಾನ್ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯವನ್ನು ತಕ್ಷಣವೇ ಮತಕ್ಕೆ ಹಾಕುವಂತೆವಿರೋಧ ಪಕ್ಷಗಳ ಸದಸ್ಯರು ಒತ್ತಾಯಿಸಿದರು. ಸದಸ್ಯರ ಗದ್ದಲದಿಂದ ಕಲಾಪವನ್ನು ಭಾನುವಾರದವರೆಗೆ ದಿಢೀರ್‌ ಮುಂದೂಡಲಾಗಿದೆ.

ಗುರುವಾರ ಸಂಸತ್ತಿನ ಕಲಾಪ ಆರಂಭವಾಗುತ್ತಿದ್ದಂತೆ ಉಪ ಸ್ಪೀಕರ್ ಖಾಸಿಂ ಸೂರಿ ಅವರು, ಈಗಾಗಲೇ ನಿರ್ಧರಿಸಲಾದ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ಮಾಡಿಕೊಟ್ಟರು. ಆದರೆ ಈ ವೇಳೆ ಪ್ರಧಾನಿ ಇಮ್ರಾನ್ ಖಾನ್ ಅವರ ವಿರುದ್ಧದ ಅವಿಶ್ವಾಸ ನಿರ್ಣಯ ಮೇಲಿನ ಮತದಾನಕ್ಕೆ ತಕ್ಷಣವೇ ಅವಕಾಶ ನೀಡಬೇಕು ಎಂದು ವಿರೋಧ ಪಕ್ಷದ ಸಂಸದರು ಒತ್ತಾಯಿಸಿದರು. ಅಲ್ಲದೆ ಸದಸ್ಯರು ಈ ಬಗ್ಗೆ ಗಟ್ಟಿ ಧ್ವನಿಯಲ್ಲಿ ಕೂಗಾಡಿದ ಹಿನ್ನೆಲೆಯಲ್ಲಿ ಕಲಾಪವನ್ನು ಉಪಸ್ಪೀಕರ್‌ ಅವರು ಭಾನುವಾರ ಬೆಳಗ್ಗೆ 11 ಗಂಟೆವರೆಗೆ ಮುಂದೂಡಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT