ಶುಕ್ರವಾರ, ಜೂನ್ 25, 2021
22 °C

ಭಾರತದೊಂದಿಗೆ ನಾವಿದ್ದೇವೆ: ಕೋವಿಡ್ ಬಿಕ್ಕಟ್ಟಿಗೆ ಮಿಡಿದ ಪಾಕ್ ಪ್ರಧಾನಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್: ಭಾರತ ಎದುರಿಸುತ್ತಿರುವ ಕೋವಿಡ್‌–19 ಬಿಕ್ಕಟ್ಟಿಗೆ ಸ್ಪಂದಿಸಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು, ‘ಮಾನವೀಯತೆಯು ಎದುರಿಸುತ್ತಿರುವ ಈ ಜಾಗತಿಕ ಸವಾಲಿನ ವಿರುದ್ಧ ಒಟ್ಟಾಗಿ ಹೋರಾಡಬೇಕು’ ಎಂದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ‘ನಮ್ಮ ನೆರೆಹೊರೆಯ ರಾಷ್ಟ್ರ ಮತ್ತು ಜಗತ್ತು ಈ ರೋಗದಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವೆ. ಕೋವಿಡ್‌–19ನಂಥ ಅಪಾಯಕಾರಿ ರೋಗದ ವಿರುದ್ಧ ಹೋರಾಡುತ್ತಿರುವ ಭಾರತದ ಜನರೊಂದಿಗೆ ನಮ್ಮ ಒಗ್ಗಟ್ಟನ್ನೂ ವ್ಯಕ್ತಪಡಿಸಲು ಇಚ್ಛಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದ ನಂತರ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಅವರು ಭಾರತದ ಜನರಿಗೆ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ನಂತರ ಪ್ರಧಾನಿ ಇಮ್ರಾನ್ ಖಾನ್ ಕೂಡಾ ಟ್ವೀಟ್ ಮಾಡಿದ್ದಾರೆ.

‘ಈ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಸಹಕಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪಾಕಿಸ್ತಾನವು ಸಾರ್ಕ್ ರಾಷ್ಟ್ರಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸಿದೆ ಎಂದು’ ಖುರೇಷಿ ಅವರು ಹೇಳಿದ್ದಾರೆ.

ಪಾಕಿಸ್ತಾನದ ಮಾಹಿತಿ ಸಚಿವ ಫವಾದ್ ಚೌಧರಿ ಕೂಡಾ ಟ್ವೀಟ್ ಮಾಡಿ ‘ಇಂಥ ಕಷ್ಟದ ಸಮಯದಲ್ಲಿ ಭಾರತದ ಜನರೊಂದಿಗೆ ನಾವು ಇರುತ್ತೇವೆ. ದೇವರು ದಯೆ ತೋರಲಿ, ಈ ಕಷ್ಟದ ಸಮಯ ಶೀಘ್ರವೇ ಮುಗಿಯಲಿ’ ಎಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು