ಭಾನುವಾರ, ನವೆಂಬರ್ 27, 2022
19 °C

ಪಾಕ್ ಸೇನೆಗೆ ನೂತನ ಮುಖ್ಯಸ್ಥನ ಆಯ್ಕೆ ಮಾಡಿದ ಪ್ರಧಾನಿ ಶೆಹಬಾಜ್ ಷರೀಫ್

ಪಿಟಿಐ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್: ಪಾಕಿಸ್ತಾನ ಸೇನೆಯ ಲೆಫ್ಟಿನೆಂಟ್ ಜನರಲ್ ಅಸಿಮ್ ಮುನೀರ್ ಅವರನ್ನು ನೂತನ ಸೇನಾ ಮುಖ್ಯಸ್ಥರನ್ನಾಗಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಗುರುವಾರ ಆಯ್ಕೆ ಮಾಡಿದ್ದಾರೆ.

ಪ್ರಸ್ತುತ ಸೇನಾ ಮುಖ್ಯಸ್ಥ ಜಾವೇದ್ ಬಜ್ವಾ (61) ಅವರು ನವೆಂಬರ್ 29 ರಂದು ನಿವೃತ್ತಿಯಾಗಲಿದ್ದಾರೆ. ಈ ಮೊದಲು ಅವರ ಅವಧಿಯನ್ನು ಮೂರು ವರ್ಷ ವಿಸ್ತರಿಸಲಾಗಿತ್ತು. ಮತ್ತೊಂದು ಅವಧಿ ವಿಸ್ತರಣೆಗೆ ಅವರು ಮನವಿ ಮಾಡಿರಲಿಲ್ಲ.

ಹಾಗೆಯೇ ಲೆಫ್ಟಿನೆಂಟ್ ಜನರಲ್ ಸಾಹಿರ್ ಶಮ್‌ಶಾದ್ ಮಿರ್ಜಾ ಜಂಟಿ ಸೇನಾ ಸಿಬ್ಬಂದಿ ಕಮಿಟಿಯ ಅಧ್ಯಕ್ಷರನ್ನಾಗಿ ಪ್ರಧಾನಿ ಆಯ್ಕೆ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು