ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌: ಇಮ್ರಾನ್‌ಖಾನ್, ಪಿಟಿಐ ಮುಖಂಡರ ವಿರುದ್ಧ ಭಯೋತ್ಪಾದನಾ ಪ್ರಕರಣ ದಾಖಲು

Last Updated 19 ಮಾರ್ಚ್ 2023, 12:39 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ವಿಧ್ವಂಸಕ ಕೃತ್ಯದಲ್ಲಿ ತೊಡಗಿದ್ದ ಆರೋಪದ ಮೇಲೆ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹಾಗೂ ಅವರ ಪಕ್ಷ ಪಾಕಿಸ್ತಾನ್‌ ತೆಹ್ರೀಕ್‌–ಎ–ಇನ್ಸಾಫ್‌ (ಪಿಟಿಐ)ನ ಹಲವು ಮುಖಂಡರ ವಿರುದ್ಧ ಇಲ್ಲಿನ ಪೊಲೀಸರು ಭಾನುವಾರ ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣ ದಾಖಲಿಸಿದ್ದಾರೆ.

‘ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ಗಲಭೆ ನಡೆಸಿದ ಪಿಟಿಐ ಮುಖಂಡರು ಹಾಗೂ ಕಾರ್ಯಕರ್ತರು, ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರು. ಬೆಂಕಿ ಹಚ್ಚುವುದು, ಕಟ್ಟಡಗಳ ನಾಶ ಹಾಗೂ ಕಲ್ಲು ತೂರಾಟ ನಡೆಸಿದರು ಎಂಬ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಪಿಟಿಐನ 17ಕ್ಕೂ ಹೆಚ್ಚು ಮುಖಂಡರ ಹೆಸರುಗಳನ್ನು ಇಸ್ಲಾಮಾಬಾದ್‌ ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಜಿಯೊ ನ್ಯೂಸ್‌ ವರದಿ ಮಾಡಿದೆ.

ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಕೋರ್ಟ್‌ ಹಾಜರಾಗಲು ಇಮ್ರಾನ್‌ಖಾನ್ ಅವರು ಲಾಹೋರ್‌ನಿಂದ ಇಸ್ಲಾಮಾಬಾದ್‌ಗೆ ಶನಿವಾರ ಬಂದಿದ್ದರು. ಅವರೊಂದಿಗೆ ಭಾರಿ ಸಂಖ್ಯೆಯಲ್ಲಿ ಬೆಂಬಲಿಗರೂ ಇದ್ದರು.

‘ಇಮ್ರಾನ್‌ಖಾನ್‌ ನ್ಯಾಯಾಲಯ ಸಂಕೀರ್ಣ ತಲುಪಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಆರಂಭಿಸಿದ ಗಲಾಟೆಯಲ್ಲಿ ಎರಡು ಪೊಲೀಸ್‌ ವಾಹನಗಳು, 7 ಬೈಕ್‌ಗಳು ಬೆಂಕಿಗೆ ಆಹುತಿಯಾದವು. ಠಾಣಾಧಿಕಾರಿಯೊಬ್ಬರ ವಾಹನವನ್ನು ಧ್ವಂಸಗೊಳಿಸಲಾಗಿದೆ’ ಎಂದೂ ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT