ಭಾನುವಾರ, ಸೆಪ್ಟೆಂಬರ್ 26, 2021
22 °C

ನಿರಾಶ್ರಿತರಿಗೆ ತಡೆ: ಗಡಿ ಮುಚ್ಚಿದ ಪಾಕ್‌

ಪಿಟಿಐ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌: ಆಫ್ಗಾನಿಸ್ತಾನವನ್ನು ತಾಲಿಬಾನ್‌ ವಶಪಡಿಸಿಕೊಂಡ ನಂತರ ಪಾಕಿಸ್ತಾನಕ್ಕೆ ವಲಸೆ ಬರುತ್ತಿರುವ ಅಫ್ಗನ್ ನಿರಾಶ್ರಿತರನ್ನು ತಡೆಯಲು ಗಡಿಯ ಪ್ರಮುಖ ರಸ್ತೆಯನ್ನು ಪಾಕಿಸ್ತಾನ ಗುರುವಾರ ಮುಚ್ಚಿತು.  

ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದ ನಡುವಿನ ಎರಡನೇ ದೊಡ್ಡ ವಾಣಿಜ್ಯ ಗಡಿ ಆದ ಚಮನ್‌ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಜಿಯೋ ನ್ಯೂಸ್‌ ವರದಿ ಮಾಡಿದೆ.

ಭದ್ರತೆ ದೃಷ್ಟಿಯಿಂದ ಚಮನ್‌ ಗಡಿ ರಸ್ತೆಯನ್ನು ಸ್ವಲ್ಪ ದಿನಗಳ ಕಾಲ ಮುಚ್ಚಲಾಗುತ್ತದೆ ಎಂದು ಪಾಕಿಸ್ತಾನ ಆಂತರಿಕ ಸಚಿವ ಶೇಖ್‌ ರಶೀದ್‌ ಅಹಮದ್‌ ಹೇಳಿದ ಬೆನ್ನಲ್ಲೇ ಈ ವರದಿ ಬಂದಿದೆ.

ನಮ್ಮ ಸೇನೆಯನ್ನು ಗಡಿಯಲ್ಲಿ ನಿಯೋಜಿಸಲಾಗಿದೆ. ಅಫ್ಗಾನಿಸ್ತಾನದಲ್ಲಿ ಶಾಂತಿ ಮತ್ತು ಸ್ಥಿರತೆ ಸ್ಥಾಪನೆಯಾಗಬೇಕು ಎಂದು ಪಾಕಿಸ್ತಾನ ಬಯಸುತ್ತದೆ ಎಂದು ಅವರು ಹೇಳಿದ್ದರು.

ಅಫ್ಗಾನಿಸ್ತಾನದ ಕಂದಹಾರ್‌ ಪ್ರಾಂತ್ಯದಿಂದ ಚಮನ್‌ ಗಡಿ ದಾಟಿ ಸಾವಿರಾರು ಅಫ್ಗನ್‌ ನಿರಾಶ್ರಿತರು ಪಾಕಿಸ್ತಾನಕ್ಕೆ ಬಂದಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಿರಾಶ್ರಿತರನ್ನು ದೇಶದ ಒಳಗೆ ಬಿಟ್ಟುಕೊಳ್ಳಲು ಸಾಧ್ಯವಿಲ್ಲ. 1979ರಲ್ಲಿ ಅಫ್ಗಾನಿಸ್ತಾನದ ಮೇಲೆ ರಷ್ಯಾ ದಾಳಿ ನಡೆಸಿದಾಗಿನಿಂದ ಈವರೆಗೆ ಸುಮಾರು 30 ಲಕ್ಷ ಅಫ್ಗನ್‌ ನಿರಾಶ್ರಿತರು ಪಾಕಿಸ್ತಾನದಲ್ಲಿ ಇದ್ದಾರೆ ಎಂದು ಭದ್ರತಾ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು