ಶುಕ್ರವಾರ, ಆಗಸ್ಟ್ 12, 2022
21 °C

ಗಿಲ್ಗಿಟ್‌–ಬಾಲ್ಟಿಸ್ತಾನ: ಪರಿಪೂರ್ಣ ಪ್ರಾಂತ್ಯವಾಗಿಸಲು ಪಾಕ್ ತೀರ್ಮಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಬಾದ್: ಗಿಲ್ಗಿಟ್ – ಬಾಲ್ಟಿಸ್ತಾನ್ ಪ್ರದೇಶವನ್ನು ಸಂವಿಧಾನಾತ್ಮಕವಾಗಿ ‘ಪರಿಪೂರ್ಣ ಪ್ರಾಂತ್ಯ‘ದ ಸ್ಥಾನಮಾನ ನೀಡಲು ಪಾಕಿಸ್ತಾನ ತೀರ್ಮಾನಿಸಿದೆ ಎಂಬ ಪಾಕಿಸ್ತಾನದ ಹಿರಿಯ ಸಚಿವರೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಎಕ್ಸ್‌ಪ್ರೆಸ್‌ ಟ್ರಿಬ್ಯುನ್ ಪತ್ರಿಕೆಯಲ್ಲಿ ಉಲ್ಲೇಖಿಸಿರುವಂತೆ ‘ಪ್ರಧಾನಿ ಇಮ್ರಾನ್‌ ಖಾನ್‌ ಶೀಘ್ರದಲ್ಲೇ ಗಿಲ್ಗಿಟ್‌–ಬಾಲ್ಟಿಸ್ತಾನ್ ಪ್ರದೇಶಕ್ಕೆ ಭೇಟಿ ನೀಡಿ, ಸಂವಿಧಾನಾತ್ಮಕ ಹಕ್ಕುಗಳ ಪ್ರಕಾರವೇ ಆ ಪ್ರದೇಶವನ್ನು ಪರಿಪೂರ್ಣ ಪ್ರಾಂತ್ಯದ ಸ್ಥಾನಮಾನ ನೀಡುವುದಾಗಿ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಕಾಶ್ಮೀರ್ ಮತ್ತು ಗಿಲ್ಗಿಟ್‌–ಬಾಲ್ಟಿಸ್ತಾನ ವ್ಯವಹಾರಗಳ ಸಚಿವ ಅಲಿ ಅಮಿನ್ ಗಂಡಾಪುರ್‌ ತಿಳಿಸಿದ್ದಾರೆ. 

‘ಪರಿಪೂರ್ಣ ಪ್ರಾಂತ್ಯದ ಸ್ಥಾನಪಡೆಯಲಿರುವ ಗಿಲ್ಗಿಟ್‌–ಬಾಲ್ಟಿಸ್ತಾನ್ ಪ್ರದೇಶವು ರಾಷ್ಟ್ರೀಯ ಅಸೆಂಬ್ಲಿ ಮತ್ತು ಸೆನೆಟ್ ಸೇರಿದಂತೆ ಎಲ್ಲ ರೀತಿಯ ಸಾಂವಿಧಾನಿಕ ಸಂಸ್ಥೆಗಳ ಪ್ರಾತಿನಿಧ್ಯವನ್ನು ಪಡೆಯಲಿದೆ‘ ಎಂದು ಗಂಡಾಪುರ್ ಹೇಳಿದ್ದಾರೆ.

‘ಪಾಕಿಸ್ತಾನ ಸರ್ಕಾರ ಎಲ್ಲ ಪಾಲುದಾರರೊಂದಿಗೆ ಸಮಾಲೋಚಿಸಿದ ನಂತರ ಗಿಲ್ಗಿಟ್– ಬಾಲ್ಟಿಸ್ತಾನ ಪ್ರಾಂತ್ಯಕ್ಕೆ ತಾತ್ವಿಕವಾಗಿ ಸಾಂವಿಧಾನಿಕ ಹಕ್ಕಗಳನ್ನು ನೀಡಲು ನಿರ್ಧಿರಿಸಿದೆ‘ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ಈ ಹಿಂದೆ ‘ ಗಿಲ್ಗಿಟ್–ಬಾಲ್ಟಿಸ್ತಾನ ಸೇರಿದಂತೆ ಇಡೀ ಜಮ್ಮು–ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿದ್ದು, ಇಲ್ಲಿ ಯಾವುದೇ ರೀತಿಯ ಕಾನೂನು ಬದಲಾವಣೆಯಂತಹ ಪ್ರಯತ್ನಗಳಳನ್ನು ನಡೆಸುವಂತಿಲ್ಲ‘ ಎಂದು ಭಾರತ, ಪಾಕಿಸ್ತಾನಕ್ಕೆ ಹೇಳಿತ್ತು.

ಈಗ ‘ಗಿಲ್ಗಿಟ್–ಬಾಲ್ಟಿಸ್ತಾನ್‌ ಪ್ರದೇಶಗಳನ್ನು ಪಾಕಿಸ್ತಾನ ಅಕ್ರಮವಾಗಿ ಅತಿಕ್ರಮಿಸಿಕೊಂಡಿದೆ. ಹೀಗಾಗಿ ಆ ಪ್ರದೇಶಗಳ ಮೇಲೆ ಪಾಕಿಸ್ತಾನಕ್ಕಾಗಲೀ ಆ ದೇಶದ ನ್ಯಾಯಾಂಗಕ್ಕಾಗಿ ಯಾವುದೇ ಹಕ್ಕಿಲ್ಲ ಎಂದು ಭಾರತ ಪುನರುಚ್ಚರಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು