18ರೊಳಗೆ ಉಗ್ರ ಮಸೂದ್ ಬಂಧನಕ್ಕೆ ಸೂಚನೆ

ಲಾಹೋರ್: ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿರುವ ನಿಷೇಧಿತ ಸಂಘಟನೆ ಜೈಷ್ –ಎ– ಮೊಹಮ್ಮದ್ನ (ಜೆಇಎಂ) ಮುಖ್ಯಸ್ಥ ಮಸೂದ್ ಅಜರ್ನನ್ನು ಜನವರಿ 18ರೊಳಗೆ ಬಂಧಿಸುವಂತೆ ಪಾಕಿಸ್ತಾನದಲ್ಲಿನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಪಂಜಾಬ್ ಪೊಲೀಸರಿಗೆ ಆದೇಶಿಸಿದೆ.
ಭಯೋತ್ಪಾದನಾ ಕಾರ್ಯಗಳಿಗೆ ಹಣಕಾಸು ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೂದ್ ವಿರುದ್ಧ ಗುಜ್ರಾನ್ವಾಲಾ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಗುರುವಾರ ಬಂಧನ ವಾರಂಟ್ ಹೊರಡಿಸಿತ್ತು.
ಗುಜ್ರಾನ್ವಾಲಾ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶರಾದ ನಟಾಶ ನಸೀಂ ಸುಪ್ರ ಅವರು ಪ್ರಕರಣದ ವಿಚಾರಣೆ ವೇಳೆ ಜನವರಿ 18ರೊಳಗೆ ಮಸೂದ್ ಅಜರ್ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನಿರ್ದೇಶಿಸಿದ್ದಾರೆ. ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ಆತನನ್ನು ಘೋಷಿತ ಅಪರಾಧಿ ಎಂದು ಘೋಷಣೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಸೂದ್ ವಿರುದ್ಧ ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ಪೂರೈಕೆ ಹಾಗೂ ಜಿಹಾದಿ ಸಾಹಿತ್ಯ ಪ್ರಚಾರ ಆರೋಪ ಇದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.