ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಇಟಿ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರ್ಪಡೆ

ಎಲ್‌ಇಟಿ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರ್ಪಡೆ
Last Updated 17 ಜನವರಿ 2023, 5:24 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಪ್ರಮುಖ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್‌ ಎ ತಯಬಾ (ಎಲ್‌ಇಟಿ) ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲಾಗಿದೆ.

ಈ ಮೂಲಕ ಮಕ್ಕಿ ವಿರುದ್ಧ ಪ್ರಯಾಣ, ಶಸ್ತ್ರಾಸ್ತ್ರ ನಿರ್ಬಂಧ ಹೇರಿಕೆ ಜೊತೆಗೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ಅಲ್‌ಕೈದಾ ನಿರ್ಬಂಧ ಸಮಿತಿಯು ಉಗ್ರಗಾಮಿ ಸಂಘಟನೆ ಜೆಯುಡಿ/ಎಲ್‌ಇಟಿ ಮುಖ್ಯಸ್ಥ ಹಫೀಜ್ ಸಯ್ಯಿದ್ ಸಂಬಂಧಿ 68 ವರ್ಷದ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ. ಈ ಕುರಿತಂತೆ ಭಾರತ ಮತ್ತು ಅಮೆರಿಕ ಸಲ್ಲಿಸಿದ್ದ ಜಂಟಿ ಪ್ರಸ್ತಾವನೆ ವಿರುದ್ಧದ ತಡೆಯನ್ನು ಚೀನಾ ಹಿಂಪಡೆದ ಬೆನ್ನಲ್ಲೇ ಭದ್ರತಾ ಮಂಡಳಿಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

‘ಮಕ್ಕಿ ಮತ್ತು ಇತರ ಉಗ್ರರು, ಭಯೋತ್ಪಾದಕ ಕೃತ್ಯಗಳಿಗೆ ಹಣ ಸಂಗ್ರಹ, ಯುವಕರ ನೇಮಕ ಮತ್ತು ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರ ಸೇರಿ ಭಾರತದಲ್ಲಿ ದಾಳಿಗೆ ಸಂಚು ರೂಪಿಸಿದ್ದರು’ ಎಂದು ನಿರ್ಬಂಧ ಸಮಿತಿ ಹೇಳಿದೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಾಲ್ಪುರದಲ್ಲಿ ಜನಿಸಿದ ಮಕ್ಕಿ ಎಲ್‌ಇಟಿಯ ಉಪನಾಯಕನಾಗಿದ್ದು, ಜೆಯುಡಿ/ಎಲ್‌ಇಟಿಯ ರಾಜಕೀಯ ವ್ಯವಹಾರಗಳ ಮುಖ್ಯಸ್ಥನಾಗಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT