ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾದಿ ಮಹಮ್ಮದ್‌ ಕುರಿತ ರಾಜಾ ಸಿಂಗ್‌ ಹೇಳಿಕೆಗೆ ಪಾಕ್‌ ಖಂಡನೆ

Last Updated 24 ಆಗಸ್ಟ್ 2022, 14:13 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌ (ಪಿಟಿಐ):ಅಮಾನತುಗೊಂಡಿರುವ ತೆಲಂಗಾಣ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್‌ ಅವರು ಪ್ರವಾದಿ ಮಹಮ್ಮದ್‌ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವುದನ್ನು ಪಾಕಿಸ್ತಾನ ಬುಧವಾರ ಖಂಡಿಸಿದೆ.

ಪದೇ ಪದೇ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕಮುಸ್ಲಿಮರ ಭಾವನೆಗೆ ಧಕ್ಕೆ ತರುತ್ತಿರುವ ಬಿಜೆಪಿ ನಾಯಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದೆ.

‘ಕಳೆದ ಮೂರು ತಿಂಗಳಲ್ಲಿ ಎರಡು ಬಾರಿ ಪ್ರವಾದಿ ಮಹಮ್ಮದ್‌ ಅವರ ಬಗ್ಗೆ ಬಿಜೆಪಿ ಹಿರಿಯ ನಾಯಕರು ಅಗೌರವಯುತ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗಳು ಪಾಕಿಸ್ತಾನದ ಮತ್ತು ಜಗತ್ತಿನ ಲಕ್ಷಾಂತರ ಮುಸ್ಲಿಮರ ಭಾವನೆಗಳಿಗೆ ತೀವ್ರ ನೋವುಂಟು ಮಾಡಿವೆ. ಸದ್ಯ ಪ್ರಕರಣ ಸಂಬಂಧ ಸಿಂಗ್‌ ಬಂಧನಕ್ಕೊಳದ ಕೆಲವೇ ಗಂಟೆಗಳ ಒಳಗಾಗಿ ಜಾಮೀನಿನ ಆಧಾರದಲ್ಲಿ ಬಿಡುಗಡೆಗೊಂಡಿರುವುದು ಖೇದಕರ’ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT