ಸೋಮವಾರ, ಆಗಸ್ಟ್ 15, 2022
27 °C

ಪಾಕಿಸ್ತಾನ: ಕುಲಭೂಷಣ್‌ ಜಾಧವ್‌ ಪ್ರಕರಣ ವಿಚಾರಣೆ ಅ.5ಕ್ಕೆ ಮುಂದೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್: ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್‌ ಜಾಧವ್‌ ಪರ ವಾದ ಮಂಡಿಸಲು ವಕೀಲರನ್ನು ನೇಮಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಇಸ್ಲಾಮಾಬಾದ್‌ ಹೈಕೋರ್ಟ್‌ ಅಕ್ಟೋಬರ್‌ 5ಕ್ಕೆ ಮುಂದೂಡಿದೆ.

ಪಾಕಿಸ್ತಾನದ ಅಟಾರ್ನಿ ಜನರಲ್‌ ಖಾಲೀದ್‌ ಜಾವೇದ್‌ ಖಾನ್‌ ಅವರು ಕುಲಭೂಷಣ್ ಜಾದವ್‌ ಪರವಾಗಿ ವಕೀಲರನ್ನು ನೇಮಿಸುವಂತೆ ಕೋರಿ ಇಸ್ಲಾಮಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

‘ಈ ಸಂಬಂಧ ಅಕ್ಟೋಬರ್‌ 5ರಂದು ವಿಚಾರಣೆ ನಡೆಸುವುದಾಗಿ ಇಸ್ಲಾಮಾಬಾದ್‌ ಹೈಕೋರ್ಟ್‌(ಐಎಚ್‌ಸಿ) ಹೇಳಿದೆ. ಅಲ್ಲದೆ ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಭಾರತೀಯ ಹೈಕಮಿಷನ್‌ನ ವಕೀಲರಿಗೂ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ’ ಎಂದು ದಿ ಎಕ್ಸ್‌ಪ್ರೆಸ್‌ ಟ್ರಿಬ್ಯೂನ್‌ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ಅಥರ್ ಮಿನಾಲಾ, ಅಮರ್‌ ಫಾರೂಕ್ ಮತ್ತು ಮಿಯಾಂಗುಲ್ ಹಸನ್ ಔರಂಗಜೇಬ್‌ ಅವರನ್ನೊಳಗೊಂಡ ಪೀಠವು, ಮೇ 7ರಂದು ನಡೆದ ವಿಚಾರಣೆ ವೇಳೆ ಜೂನ್‌ 15ರೊಳಗೆ ಜಾಧವ್‌ ಪರ ವಾದ ಮಂಡಿಸಲು ವಕೀಲರನ್ನು ನೇಮಿಸುವಂತೆ ಸೂಚಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು