ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಫೀಜ್ ಸಯೀದ್‌ನ ಮೂವರು ಆಪ್ತರಿಗೆ ಪಾಕ್ ನ್ಯಾಯಾಲಯದಿಂದ 16 ವರ್ಷ ಜೈಲು ಶಿಕ್ಷೆ

Last Updated 29 ಆಗಸ್ಟ್ 2020, 1:24 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಜಮಾತ್ ಉದ್ ದಾವಾ (ಜೆಯುಡಿ) ಮುಖ್ಯಸ್ಥ, 2008ರ ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್‌ನ ಮೂವರು ಆಪ್ತರಿಗೆ ಪಾಕಿಸ್ತಾನದ ಭಯೋತ್ಪಾದನೆ ನಿಗ್ರಹ ನ್ಯಾಯಾಲಯ 16 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಈ ತೀರ್ಪು ಪ್ರಕಟಿಸಲಾಗಿದೆ.

ಈ ಮೂವರಲ್ಲಿ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಹಫೀಜ್ ಅಬ್ದುಲ್ ರೆಹಮಾನ್ ಮಕ್ಕಿ, ಹಫೀಜ್ ಅದ್ಬುಸ್ ಸಲಾಮ್ ಸಹ ಸೇರಿದ್ದಾರೆ. ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಮತ್ತೊಂದು ಪ್ರಕರಣದಲ್ಲಿ ಇವರ ವಿರುದ್ಧ ನೀಡಲಾಗಿದ್ದ ತೀರ್ಪನ್ನು ಲಾಹೋರ್ ಹೈಕೋರ್ಟ್ ಅಮಾನತುಗೊಳಿಸಿತ್ತು. ಬಳಿಕ ಜಾಮೀನು ಪಡೆದು ಅವರು ಬಿಡುಗಡೆಯಾಗಿದ್ದರು.

‘ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಮತ್ತೊಂದು ಪ್ರಕರಣದಲ್ಲಿ ಜಾಫರ್ ಇಕ್ಬಾಲ್ ಮತ್ತು ಹಫೀಜ್ ಅಬ್ದುಸ್ ಸಲಾಮ್ ಬಿನ್ ಮುಹಮ್ಮದ್‌ಗೆ ಹದಿನಾರೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ತಲಾ 1.5 ಲಕ್ಷ ದಂಡ ವಿಧಿಸಲಾಗಿದೆ’ ಎಂದು ಕೋರ್ಟ್‌ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ನಿಷೇಧಿತ 88 ಉಗ್ರ ಸಂಘಟನೆಗಳು, ಅವುಗಳ ನಾಯಕರ ಮೇಲೆ ಪಾಕಿಸ್ತಾನ ಇತ್ತೀಚೆಗಷ್ಟೇ ಕಠಿಣ ಹಣಕಾಸು ನಿರ್ಬಂಧ ವಿಧಿಸಿತ್ತು. ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದರ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆ ಹಣಕಾಸು ಕಾರ್ಯಪಡೆಯ (ಎಫ್‌ಎಟಿಎಫ್‌) ‘ಬೂದು ಪಟ್ಟಿ’ಯಲ್ಲಿ ಗುರುತಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು ಈ ಕ್ರಮ ಕೈಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT