ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಮಹಿಳೆಯರು ಸೇರಿ 200 ಅಫ್ಗನ್‌ ಪ್ರಜೆಗಳ ಗಡಿಪಾರು

Last Updated 8 ಸೆಪ್ಟೆಂಬರ್ 2021, 7:17 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ‘ಅಫ್ಗಾನಿಸ್ತಾನವನ್ನು ತಾಲಿಬಾನ್‌ ವಶಪಡಿಸಿಕೊಂಡ ನಂತರ ಪಾಕಿಸ್ತಾನವು ಮಹಿಳೆಯರು, ಮಕ್ಕಳು ಸೇರಿದಂತೆ 200 ಅಫ್ಗನ್‌ ಪ್ರಜೆಗಳನ್ನು ಗಡಿಪಾರು ಮಾಡಿದೆ’ ಎಂದು ಡಾನ್‌ ಪತ್ರಿಕೆ ಬುಧವಾರ ವರದಿ ಮಾಡಿದೆ.

‘ವಿವಿಧ ಭಾಗಗಳಿಂದ ಪಾಕಿಸ್ತಾನದೊಳಗೆ ಪ್ರವೇಶಿಸಿದ ಅಫ್ಗನ್‌ ಪ್ರಜೆಗಳು ಚಮನ್‌ನ ರೈಲ್ವೆ ಸ್ಟೇಷನ್‌ನಲ್ಲಿ ಕೆಲ ದಿನಗಳ ಕಾಲ ಉಳಿದುಕೊಂಡಿದ್ದರು. ಬಳಿಕ ಅಧಿಕಾರಿಗಳು ಅವರನ್ನು ಅಲ್ಲಿಂದ ತೆರಳುವಂತೆ ಸೂಚಿಸಿದ್ದರು’ ಎಂದು ವರದಿಯಲ್ಲಿ ಹೇಳಲಾಗಿದೆ.

‘ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಕ್ವೆಟ್ಟಾಗೆ ತಲುಪಿದ ಕುಂದುಜ್‌ ಪ್ರಾಂತ್ಯದ ಅಫ್ಗನ್‌ ಪ್ರಜೆಗಳು ಬಲೇಲಿಯಲ್ಲಿ ಉಳಿದುಕೊಂಡಿದ್ದರು. ಆದರೆ, ಅಲ್ಲಿನ ಅಧಿಕಾರಿಗಳು ಕೂಡ ಅಫ್ಗನ್‌ ಪ್ರಜೆಗಳಿಗೆ ಉಳಿಯಲು ಅನುಮತಿ ನಿರಾಕರಿಸಿದರು. ಅಫ್ಗನ್‌ ನಿರಾಶ್ರಿತರನ್ನು ಕಸ್ಟಡಿಗೆ ತೆಗೆದುಕೊಂಡ ಅಧಿಕಾರಿಗಳು, ಅವರನ್ನು ಮಂಗಳವಾರ ಅಫ್ಗಾನಿಸ್ತಾನಕ್ಕೆ ಗಡಿಪಾರು ಮಾಡಿದ್ದಾರೆ’ ಎಂದು ವರದಿ ತಿಳಿಸಿದೆ.

‘ಮಹಿಳೆಯರು, ಮಕ್ಕಳು ಸೇರಿದಂತೆ 200 ಅಫ್ಗನ್‌ ಪ್ರಜೆಗಳನ್ನು ಅವರ ದೇಶಕ್ಕೆ ಗಡಿಪಾರು ಮಾಡಲಾಗಿದೆ. ಪಾಕಿಸ್ತಾನದಲ್ಲಿ ಅವರು ಕಾನೂನುಬಾಹಿರವಾಗಿ ವಾಸವಾಗಿದ್ದರಿಂದ ಅವರನ್ನು ವಾಪಸ್ ಕಳುಹಿಸಲಾಗಿದೆ’ ಎಂದು ಕ್ವೆಟ್ಟಾ ವಿಭಾಗದ ಆಯುಕ್ತ ಸೊಹೈಲ್ ಉರ್ ರೆಹಮಾನ್ ಬಲೂಚ್ ಹೇಳಿರುವುದಾಗಿ ಪತ್ರಿಕೆ ವರದಿ ಮಾಡಿದೆ.

‘ಪಾಕಿಸ್ತಾನಕ್ಕೆ ಅಕ್ರಮವಾಗಿ ಪ್ರವೇಶಿಸುವ ಅಫ್ಗನ್‌ ನಿರಾಶ್ರಿತರನ್ನು ವಾಪಸ್‌ ಕಳುಹಿಸಲಾಗುವುದು. ವೀಸಾ ಸೇರಿದಂತೆ ಇತರೆ ದಾಖಲೆಗಳಿಲ್ಲದ ಅಫ್ಗನ್‌ ಪ್ರಜೆಗಳಿಗೆ ಪಾಕಿಸ್ತಾನಕ್ಕೆ ಪ್ರವೇಶಿಸಲು ಅನುಮತಿ ನೀಡುವುದಿಲ್ಲ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT