ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನ್ ಬಗ್ಗೆ ಜೋ ಬೈಡನ್‌ ನಿರ್ಧಾರದ ಕುರಿತು ಪಾಕಿಸ್ತಾನ ರಾಯಭಾರಿ ಏನಂದ್ರು?

Last Updated 17 ಆಗಸ್ಟ್ 2021, 8:02 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ‘ಅಫ್ಗಾನಿಸ್ತಾನದಿಂದ ಅಮೆರಿಕದ ಸೇನೆಯನ್ನು ವಾಪಸ್‌ ಕರೆಸಿಕೊಳ್ಳುವ ಹಿಂದಿನ ಸರ್ಕಾರದ ನಿರ್ಧಾರಕ್ಕೆ ಅನುಮೋದನೆ ನೀಡುವ ಮೂಲಕ ಅಧ್ಯಕ್ಷ ಜೋ ಬೈಡನ್‌ ಅವರು ಸಂಘರ್ಷವನ್ನು ಅಂತ್ಯಗೊಳಿಸಲು ತಾರ್ಕಿಕ ತೀರ್ಮಾನ ಕೈಗೊಂಡರು’ ಎಂದು ವಿಶ್ವಸಂಸ್ಥೆಯಲ್ಲಿನ ಪಾಕಿಸ್ತಾನದ ರಾಯಭಾರಿ ಅಕ್ರಂ ಹೇಳಿದ್ದಾರೆ.

ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮಂಗಳವಾರ ವರದಿಗಾರರೊಂದಿಗೆ ಮಾತನಾಡಿದ ಅವರು, ‘ಅಫ್ಗಾನಿಸ್ತಾನದ ಶಾಂತಿ, ಭದ್ರತೆ, ಅಭಿವೃದ್ಧಿ ಮತ್ತು ರಾಜಕೀಯ ಸ್ಥಿರತೆಗಾಗಿ ಅಂತರರಾಷ್ಟ್ರೀಯ ಸಮುದಾಯಗಳು ಜತೆಯಾಗಿ ಕೆಲಸ ಮಾಡಬೇಕು’ ಎಂದರು.

ಅಫ್ಗಾನಿಸ್ತಾನದ ಬಿಕ್ಕಟ್ಟಿಗೆ ಸೇನೆ ಪರಿಹಾರವಲ್ಲ ಎಂಬುದು ಪಾಕಿಸ್ತಾನದ ನಿಲುವು ಎಂದು ಅವರು ಹೇಳಿದರು.

‘ಅಫ್ಗಾನಿಸ್ತಾನದಲ್ಲಿ ಅಮೆರಿಕ ಮತ್ತು ನ್ಯಾಟೊ ಸೇನೆಯು ಗರಿಷ್ಠ ಪ್ರಮಾಣದಲ್ಲಿದ್ದಾಗ ಬಹುಶಃ ಮಾತುಕತೆಯ ಮೂಲಕ ಸಂಘರ್ಷವನ್ನು ಅಂತ್ಯಗೊಳಿಸಬಹುದಾಗಿತ್ತು. ಅದುವೇ ಮಾತುಕತೆಗೆ ಉತ್ತಮ ಸಮಯವಾಗಿತ್ತು’ ಎಂದು ಅವರು ಅಭಿ‍ಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT