ಭಾನುವಾರ, ಜೂನ್ 26, 2022
21 °C
ಪ್ರತ್ಯೇಕತಾವಾದಿ ನಾಯಕ ಯಾಸಿನ್‌ ಮಲಿಕ್‌ ಬಿಡುಗಡೆಗೆ ಭಾರತಕ್ಕೆ ಆಗ್ರಹಿಸಲು ಮನವಿ

ಕಾಶ್ಮೀರ ಸ್ಥಿತಿ: ವಿಶ್ವಸಂಸ್ಥೆಗೆ ಪಾಕ್‌ ವಿದೇಶಾಂಗ ಸಚಿವ ಝರ್ದಾರಿ ಪತ್ರ

ಪಿಟಿಐ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌: ಭಾರತ ಸರ್ಕಾರ ಕಾಶ್ಮೀರದಲ್ಲಿ ಜನರ ಧ್ವನಿ ಅಡಗಿಸಲು ಪ್ರಯತ್ನಿಸುತ್ತಿದೆ. ಸುಳ್ಳು ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ತಳ್ಳುತ್ತಿದೆ ಎಂದು ಆರೋಪಿಸಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೊ ಝರ್ದಾರಿ ಅವರು ವಿಶ್ವಸಂಸ್ಥೆಯ ಮಾನವಹಕ್ಕುಗಳ ಹೈಕಮಿಷನರ್‌ ಮಿಚೆಲ್ ಬಚೆಲೆಟ್‌ ಅವರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನ ವಿದೇಶಾಂಗ ಸಚಿವಾಲಯ, ಕಾಶ್ಮೀರದ ಪ್ರಸ್ತುತ ಸ್ಥಿತಿ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯದ ಗಮನ ಸೆಳೆಯುವ ಪ್ರಯತ್ನದ ಭಾಗವಾಗಿ ಈ ಪತ್ರ ಬರೆಯಲಾಗಿದೆ ಎಂದು ತಿಳಿಸಿದೆ. 

ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್‌ ಮಲಿಕ್‌ ಅವರನ್ನು ಜೈಲಿನಿಂದ ತತ್‌ಕ್ಷಣವೇ ಬಿಡುಗಡೆಗೊಳಿಸಲು  ಮತ್ತು ಅವರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಕೈಬಿಡಲು ಭಾರತಕ್ಕೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು