ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂ ದೇವಾಲಯ ನಿರ್ಮಾಣಕ್ಕೆ ಪಾಕ್‌ ಸರ್ಕಾರ ಒಪ್ಪಿಗೆ

Last Updated 22 ಡಿಸೆಂಬರ್ 2020, 7:26 IST
ಅಕ್ಷರ ಗಾತ್ರ

ಲಾಹೋರ್‌: ಇಸ್ಲಾಮಾಬಾದ್‌ನಲ್ಲಿ ಹಿಂದೂ ದೇವಸ್ಥಾನ ನಿರ್ಮಿಸಲು ಪಾಕಿಸ್ತಾನ ಸರ್ಕಾರವು ಅನುಮತಿ ನೀಡಿದೆ.

ಈ ಹಿಂದೆ ಇಸ್ಲಾಂ ಸಮುದಾಯಗಳ ಒತ್ತಡದಿಂದಾಗಿ ದೇವಸ್ಥಾನ ನಿರ್ಮಾಣ ಕಾರ್ಯ ಸ್ಥಗಿತಗೊಂಡಿತ್ತು. ಆದರೆ ಇದೀಗ ನಿರ್ಮಾಣ ಕಾರ್ಯ ಸ್ಥಗಿತಗೊಂಡ ಆರು ತಿಂಗಳ ಬಳಿಕ ದೇವಸ್ಥಾನ ನಿರ್ಮಿಸಲು ಪಾಕಿಸ್ತಾನ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಅಷ್ಟೇ ಅಲ್ಲದೆ ಇಸ್ಲಾಮಾಬಾದ್‌ನ ಹೆಚ್ -9 / 2 ಸೆಕ್ಟರ್‌ನಲ್ಲಿ ಹಿಂದೂ ಸಮುದಾಯದ ಶವಾಗಾರದ ಸುತ್ತಲೂ ಗೋಡೆ ಕಟ್ಟಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಲಾಹೋರ್‌ನಲ್ಲಿ ರಾಜಧಾನಿ ಅಭಿವೃದ್ಧಿ ಪ್ರಾಧಿಕಾರವು (ಸಿಡಿಎ) ಸೋಮವಾರ ಅಧಿಸೂಚನೆ ಹೊರಡಿಸಿದೆ.

ಈ ಹಿಂದೆ ಕೆಲವರು ಪಾಕಿಸ್ತಾನ ಸರ್ಕಾರಕ್ಕೆ ಹಿಂದೂ ದೇವಸ್ಥಾನ ನಿರ್ಮಿಸಲು ಅನುಮತಿ ನೀಡಬಾರದೆಂದು ಎಚ್ಚರಿಕೆ ನೀಡಿದ್ದರು.

ಧಾರ್ಮಿಕ ವ್ಯವಹಾರಗಳ ಸಚಿವ ಪಿರ್ ನೂರ್ಲ್ ಹಕ್ ಖಾದ್ರಿ ಅವರು ಈ ವಿಚಾರವನ್ನು ಇಸ್ಲಾಮಿಕ್‌ ತತ್ವಗಳ ಸಮಿತಿಗೆ ಒಪ್ಪಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಸಮಿತಿಯು, ದೇವಾಲಯ ನಿರ್ಮಾಣಕ್ಕೆ ಅಡ್ಡಿ ಇಲ್ಲ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT