ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮವಾಗಿ ಪಾಕ್ ಪ್ರವೇಶಿಸಿ 8 ವರ್ಷ ಶಿಕ್ಷೆ ಅನುಭವಿಸಿದ್ದ ಭಾರತೀಯರ ಹಸ್ತಾಂತರ

Last Updated 31 ಆಗಸ್ಟ್ 2021, 8:21 IST
ಅಕ್ಷರ ಗಾತ್ರ

ಲಾಹೋರ್‌: ಪಾಕಿಸ್ತಾನದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದಕ್ಕಾಗಿ 8 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಇಬ್ಬರು ಭಾರತೀಯರನ್ನು ಪಾಕಿಸ್ತಾನವು ಭಾರತದ ಗಡಿ ಭದ್ರತಾ ಪಡೆಗೆ ಹಸ್ತಾಂತರಿಸಿದೆ’ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದರು.

ಶರ್ಮಾ ರಜ‍ಪೂತ್‌ ಮತ್ತು ರಾಮ್‌ ಬುಹಾದಾರ್‌ ಎಂಬವರು 2013ರಲ್ಲಿ ಕಾಶ್ಮೀರದ ಎಲ್ಒಸಿ ಮೂಲಕ ಪಾಕಿಸ್ತಾನವನ್ನು ಪ್ರವೇಶಿಸಿದ್ದರು. ಅವರನ್ನು ಪಾಕಿಸ್ತಾನ ರೇಜಂರ್ಸ್‌ ಬಂಧಿಸಿದ್ದರು.

‘ಈ ಇಬ್ಬರು ಭಾರತೀಯರು ಬುದ್ದಿಮಾಂದ್ಯರಾಗಿದ್ದು, ಅಜಾಗರೂಕತೆಯಿಂದ ಗಡಿಯನ್ನು ದಾಟಿದ್ದಾರೆ ಎಂಬುದು ನಂತರದಲ್ಲಿ ತನಿಖೆ ವೇಳೆ ತಿಳಿದುಬಂದಿದೆ. ಅವರಿಬ್ಬರ ಫೋಟೋಗಳನ್ನು ಭಾರತದೊಂದಿಗೆ ಹಂಚಿಕೊಳ್ಳಲಾಗಿತ್ತು. ಭಾರತವು ಅವರ ಗುರುತನ್ನು ದೃಢೀಕರಿಸಿದ ಬಳಿಕ ಪಾಕಿಸ್ತಾನ ಸರ್ಕಾರವು ಸೋಮವಾರ ಅವರಿಬ್ಬರನ್ನು ವಾಘಾ ಗಡಿಯಲ್ಲಿ ಭಾರತಕ್ಕೆ ಹಸ್ತಾಂತರಿಸಿತು’ ಎಂದು ಅವರು ಹೇಳಿದರು.

ಕಳೆದ ವರ್ಷ ಗೂಢಚಾರ್ಯೆ ಮತ್ತು ಅಕ್ರಮ ಗಡಿ ಪ್ರವೇಶ ಆರೋಪದಡಿ 19 ಭಾರತೀಯರನ್ನು ಪಾಕಿಸ್ತಾನಿ ಅಧಿಕಾರಿಗಳು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT