ಶುಕ್ರವಾರ, ಮಾರ್ಚ್ 31, 2023
22 °C

ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಲೀಟರ್‌ಗೆ ₹249!

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌: ವಿದ್ಯುತ್‌, ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೀಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬರೆ. ಭಾನುವಾರದಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ ₹35 ಹೆಚ್ಚಿಸಿದೆ. 

ವಿತ್ತ ಸಚಿವ ಇಶಾಕ್ ದಾರ್ ಬೆಲೆ ಏರಿಕೆ ಘೋಷಿಸಿದ್ದಾರೆ. ಸೀಮೆ ಎಣ್ಣೆ ಮತ್ತು ಲೈಟ್‌ ಡೀಸೆಲ್ ಬೆಲೆಗಳನ್ನು ಲೀಟರ್‌ಗೆ ₹18 ಹೆಚ್ಚಿಸಲಾಗಿದೆ ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಪೆಟ್ರೋಲಿಯಂ ಕೊರತೆಯ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕೃತಕ ಕೊರತೆ ಸೃಷ್ಟಿಸಲಾಗುತ್ತಿದೆ ಎಂದಿದ್ದಾರೆ.

ಇಂದಿನ ಏರಿಕೆಯೊಂದಿಗೆ, ಪೆಟ್ರೋಲ್‌ ಬೆಲೆ ಪ್ರತಿ ಲೀಟರ್‌ಗೆ ₹249.80 ಆಗಿದ್ದರೆ, ಡೀಸೆಲ್ ಲೀಟರ್‌ಗೆ ₹262.80, ಸೀಮೆ ಎಣ್ಣೆ ಲೀಟರ್‌ಗೆ ₹189.83 ಮತ್ತು  ಡೀಸೆಲ್ ಉಪ ಉತ್ಪನ್ನ ಬೆಲೆ ₹187 ಆಗಿದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು