ಶನಿವಾರ, ಮಾರ್ಚ್ 25, 2023
22 °C

ಟಿಎಲ್‌ಪಿ ಉಗ್ರ ಸಂಘಟನೆ ಮೇಲಿನ ನಿಷೇಧ ತೆರವುಗೊಳಿಸಿದ ಪಾಕ್ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಪಾಕಿಸ್ತಾನ ಸರ್ಕಾರವು ತೆಹ್ರೀಕ್-ಇ-ಲಬ್ಬೈಕ್ ಪಾಕಿಸ್ತಾನ್ (ಟಿಎಲ್‌ಪಿ) ಉಗ್ರಗಾಮಿ ಸಂಘಟನೆಯ ಮೇಲಿನ ನಿಷೇಧವನ್ನು ಹಿಂತೆಗೆದುಕೊಂಡಿದೆ.

ಫ್ರಾನ್ಸ್‌ನಲ್ಲಿ ಧರ್ಮನಿಂದನೆಯ ಕಾರ್ಟೂನ್‌ಗಳು ಪ್ರಕಟಗೊಂಡಿದ್ದನ್ನು ವಿರೋಧಿಸಿ, ಫ್ರೆಂಚ್ ರಾಯಭಾರಿಯನ್ನು ಹೊರ ಹಾಕುವಂತೆ ಒತ್ತಾಯಿಸಿ ಟಿಎಲ್‌ಪಿ ಸಂಘಟನೆ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 20 ಮಂದಿ ಸಾವನ್ನಪ್ಪಿದ್ದರು. ಇದರಲ್ಲಿ ಅರ್ಧದಷ್ಟು ಪೊಲೀಸರು ಸೇರಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಕಳೆದ ಏಪ್ರಿಲ್‌ನಲ್ಲಿ ಟಿಎಲ್‌ಪಿಯನ್ನು ನಿಷೇಧಿತ ಸಂಘಟನೆ ಎಂದು ಘೋಷಿಸಿತ್ತು.

ಇತ್ತೀಚೆಗೆ ಟಿಎಲ್‌ಪಿಯೊಂದಿಗೆ ರಹಸ್ಯ ಒಪ್ಪಂದ ಮಾಡಿಕೊಂಡ ಸರ್ಕಾರ, ಭವಿಷ್ಯದಲ್ಲಿ ಕಾನೂನು ನಿಯಮ ಅನುಸರಿಸಲು ಟಿಎಲ್‌ಪಿ ಬದ್ಧತೆ ತೋರಿದ ನಂತರ, ಭಾನುವಾರ ಸಂಘಟನೆ ಮೇಲಿದ್ದ ನಿಷೇಧವನ್ನು ಸರ್ಕಾರ ತೆಗೆದು ಹಾಕಿ, ಔಪಚಾರಿಕ ಅಧಿಸೂಚನೆಯನ್ನು ಹೊರಡಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು