ಶುಕ್ರವಾರ, ಡಿಸೆಂಬರ್ 4, 2020
24 °C

ಪಾಕಿಸ್ತಾನದಲ್ಲಿ ವಿಜೃಂಭಣೆಯ ದೀಪಾವಳಿ ಆಚರಣೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಲಾಹೋರ್‌: ಪಾಕಿಸ್ತಾನದಲ್ಲಿ ನೆಲೆಸಿರುವ ಹಿಂದೂಗಳು ಶನಿವಾರ ವಿಜೃಂಭಣೆಯ ದೀಪಾವಳಿ ಆಚರಿಸಿಕೊಂಡಿದ್ದಾರೆ.

ದೀಪಾವಳಿ ಪ್ರಯುಕ್ತ ಲಾಹೋರ್‌, ಕರಾಚಿ ಸೇರಿದಂತೆ ಪಾಕಿಸ್ತಾನದ ಇತರ ಪ್ರಮುಖ ನಗರಗಳಲ್ಲಿ ನೆಲೆಸಿರುವ ಲಕ್ಷಾಂತರ ಹಿಂದೂಗಳು ದೇವಸ್ಥಾನಗಳಿಗೆ ಭೇಟಿ ನೀಡಿ ಪರಸ್ಪರ ಶುಭ ಹಾರೈಸಿಕೊಂಡಿದ್ದಾರೆ.

ಹಬ್ಬದ ಅಂಗವಾಗಿ ಕರಾಚಿಯ ಸ್ವಾಮಿ ನಾರಾಯಣ ದೇವಾಲಯ ಮತ್ತು ಲಾಹೋರ್‌ನ ಶ್ರೀ ಕೃಷ್ಣ ದೇವಾಲಯಗಳನ್ನು ದೀಪಗಳಿಂದ ಅಲಂಕರಿಸಲಾಗಿತ್ತು.

ಶುಭ ಕೋರಿದ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌

ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರ ದೀಪಾವಳಿಯ ಶುಭಾಶಯ ಕೋರಿದ್ದಾರೆ.

'ದೇಶದ ಹಿಂದೂಗಳಿಗೆಲ್ಲ ದೀಪಾವಳಿಯ ಶುಭಾಶಯಗಳು' ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು