ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌: ಮುಖ್ಯ ನ್ಯಾಯಮೂರ್ತಿ ಅಧಿಕಾರ ಮೊಟಕು– ಮಸೂದೆ ಅಂಗೀಕಾರ

Last Updated 29 ಮಾರ್ಚ್ 2023, 13:43 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ); ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ವಿವೇಚನಾ ಅಧಿಕಾರವನ್ನು ಮೊಟಕುಗೊಳಿಸುವ ಮಸೂದೆಯನ್ನು ಪಾಕಿಸ್ತಾನ ಸಂಸತ್‌ ಬುಧವಾರ ಅಂಗೀಕರಿಸಿದೆ.

ದೇಶದ ಉನ್ನತ ನ್ಯಾಯಮೂರ್ತಿಗಳ ಅಧಿಕಾರ ಮೊಟಕುಗೊಳಿಸಲು ಕಾನೂನು ಜಾರಿಗೆ ತರದಿದ್ದರೆ ‘ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ’ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಮಂಗಳವಾರ ಹೇಳಿದ್ದರು. ಮಾರನೇ ದಿನವೇ ಈ ಮಸೂದೆಗೆ ಸಂಸತ್‌ನಲ್ಲಿ ಅನುಮೋದನೆ ನೀಡಲಾಗಿದೆ.

ಕಾನೂನು ಸಚಿವ ಅಜಂ ನಜೀರ್ ತರಾರ್ ಅವರು ಮಂಗಳವಾರ ರಾತ್ರಿ ಸಂಸತ್ತಿನಲ್ಲಿ ‘ಸುಪ್ರೀಂ ಕೋರ್ಟ್ (ಕಾರ್ಯ ಮತ್ತು ವಿಧಾನ) ಮಸೂದೆ, 2023' ಮಂಡಿಸಿದರು.

‘ಸಂಸತ್‌ ಈ ಮಸೂದೆಯನ್ನು ಅಂಗೀಕರಿಸಿದೆ’ ಎಂದು ಕೆಳಮನೆ ಟ್ವೀಟ್ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT