ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಪರಿಹಾರ ವಸ್ತುಗಳನ್ನು ನೀಡಲು ಪಾಕಿಸ್ತಾನ ಸಿದ್ಧ: ಇಮ್ರಾನ್‌ ಖಾನ್‌

Last Updated 25 ಏಪ್ರಿಲ್ 2021, 6:28 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಕೋವಿಡ್‌–19ನ ಎರಡನೇ ಅಲೆಯನ್ನು ಎದುರಿಸಲು ಭಾರತಕ್ಕೆ ವೆಂಟಿಲೇಟರ್‌ ಸೇರಿದಂತೆ ಅಗತ್ಯ ನೆರವು ನೀಡಲು ಪಾಕಿಸ್ತಾನ ಮುಂದಾಗಿದೆ. ಉಭಯ ರಾಷ್ಟ್ರಗಳು ಸಹಕಾರವನ್ನು ಹೆಚ್ಚಿಸುವ ಮೂಲಕ ಸೋಂಕಿನಿಂದ ಸೃಷ್ಟಿಯಾಗಿರುವ ಬಿಕ್ಕಟ್ಟಿನ್ನು ನಿಭಾಯಿಸಲು ಮಾರ್ಗಗಳನ್ನು ಪತ್ತೆ ಹಚ್ಚಬಹುದು ಎಂದು ಪಾಕಿಸ್ತಾನ ಹೇಳಿದೆ.

‘ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತೀಯರೊಂದಿಗೆ ಪಾಕಿಸ್ತಾನ ನಿಂತಿದೆ. ಭಾರತಕ್ಕೆ ವೆಂಟಿಲೇಟರ್‌, ಬಿಐ ಪಿಎಪಿ, ಡಿಜಿಟಲ್‌ ಎಕ್ಸ್‌–ರೇ ಉಪಕರಣಗಳು, ಪಿಪಿಇ ಕಿಟ್‌ಗಳು ನೀಡಲು ಪಾಕಿಸ್ತಾನ ಸಿದ್ಧ’ ಎಂದು ಅಲ್ಲಿನ ವಿದೇಶಾಂಗ ಸಚಿವಾಲಯವು ಹೇಳಿಕೆ ಬಿಡುಗಡೆ ಮಾಡಿದೆ.

‘ಅತಿ ಶೀಘ್ರದಲ್ಲಿ ಪರಿಹಾರ ವಸ್ತುಗಳನ್ನು ವಿತರಿಸಲು ವಿಧಾನವನ್ನು ಪತ್ತೆಹಚ್ಚಲಾಗುತ್ತದೆ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಅವರು,‘ ನೆರೆರಾಷ್ಟ್ರ ಮತ್ತು ವಿಶ್ವದಲ್ಲಿ ಸಾಂಕ್ರಾಮಿಕದಿಂದ ಬಳಲುತ್ತಿರುವ ಎಲ್ಲರೂ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾವು ಪ್ರಾರ್ಥಿಸುತ್ತೇನೆ. ಕೋವಿಡ್‌ ವಿರುದ್ಧ ಹೋರಾಡುತ್ತಿರುವ ಭಾರತದ ಜತೆಗೆ ನಾವು ಇದ್ದೇವೆ. ನಾವು ಮಾನವೀಯತೆಯಿಂದ ಈ ಜಾಗತಿಕ ಸವಾಲನ್ನು ಒಟ್ಟಾಗಿ ಎದುರಿಸಬೇಕು’ ಎಂದು ಅವರು ಹೇಳಿದರು.

‘ಈ ಸಂದರ್ಭದಲ್ಲಿ ಪರಸ್ಪರ ಒಬ್ಬರನ್ನೊಬ್ಬರು ಬೆಂಬಲಿಸಬೇಕು’ ಎಂದು ಮಾಜಿ ಕ್ರಿಕೆಟ್‌ ಆಟಗಾರ ಶೋಯೆಬ್‌ ಅಖ್ತರ್‌ ಟ್ವೀಟ್‌ ಮಾಡಿದ್ದಾರೆ.

ಪಾಕಿಸ್ತಾನದ ಹಲವು ರಾಜಕೀಯ ನಾಯಕರು, ಕ್ರೀಡಾ ತಾರೆಯರು ಟ್ವಿಟರ್‌ನಲ್ಲಿ ಭಾರತಕ್ಕೆ ಬೆಂಬಲ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT