ಗುರುವಾರ , ನವೆಂಬರ್ 26, 2020
21 °C

ಜಾಧವ್ ಮರಣದಂಡನೆ ಪುನರ್ ಪರಿಶೀಲಿಸುವ ಮಸೂದೆಗೆ ಪಾಕ್ ಸಂಸದೀಯ ಸಮಿತಿ ಅನುಮೋದನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್‌ ಅವರಿಗೆ ನೀಡಿರುವ ಮರಣ ದಂಡನೆ ಶಿಕ್ಷೆಯನ್ನು ಪುನರ್ ಪರಿಶೀಲಿಸುವ ಮಸೂದೆಗೆ ಪಾಕಿಸ್ತಾನದ ಸಂಸದೀಯ ಸಮಿತಿ ಅನುಮೋದನೆ ನೀಡಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ‘ಅಂತರರಾಷ್ಟ್ರೀಯ ನ್ಯಾಯಾಲಯ (ವಿಮರ್ಶೆ ಮತ್ತು ಮರುಪರಿಶೀಲನೆ) ಸುಗ್ರೀವಾಜ್ಞೆ‘ ಎಂಬ ಶೀರ್ಷಿಕೆಯ ಕರಡು ಮಸೂದೆಯನ್ನು ಬುಧವಾರ ಕಾನೂನು ಮತ್ತು ನ್ಯಾಯಾಂಗ ರಾಷ್ಟ್ರೀಯ ಅಸೆಂಬ್ಲಿಯ ಸ್ಥಾಯಿ ಸಮಿತಿ ಅಂಗೀಕರಿಸಿತು. 

ಚರ್ಚೆಯಲ್ಲಿ ಭಾಗವಹಿಸಿದ ಫೆಡರಲ್ ಕಾನೂನು ಮತ್ತು ನ್ಯಾಯಾಂಗ ಸಚಿವ ಫರೋಗ್ ನಸೀಮ್, ‘ಅಂತರರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ನಿರ್ದೇಶನಗಳಿಗೆ ಅನುಸಾರವಾಗಿ ಮಸೂದೆಯನ್ನು ಮಂಡಿಸಲಾಗಿದೆ‘ ಎಂದು ಹೇಳಿದರು.

ಸಂಸತ್ತು ಮಸೂದೆ ಅಂಗೀಕರಿಸದಿದ್ದಲ್ಲಿ ಐಸಿಜೆ ತೀರ್ಪನ್ನು ಪಾಲಿಸದ ಕಾರಣ ಪಾಕಿಸ್ತಾನವು ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಐವತ್ತು ವರ್ಷದ ನಿವೃತ್ತ ಭಾರತೀಯ ನೌಕಾಪಡೆಯ ಅಧಿಕಾರಿ ಜಾಧವ್‌ಗೆ 2017ರ ಏಪ್ರಿಲ್‌ನಲ್ಲಿ ಗೂಢಚರ್ಯೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು.

2017ರಲ್ಲಿ, ಜಾಧವ್ ಅವರಿಗೆ ಕಾನ್ಸುಲ್‌ ಭೇಟಿಗೆ ಪಾಕಿಸ್ತಾನ ಅವಕಾಶ ನಿರಾಕರಿಸಿದ ಕಾರಣ, ಭಾರತ ಪಾಕಿಸ್ತಾನದ ವಿರುದ್ಧ ಅಂತರರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು