ಶುಕ್ರವಾರ, ಜುಲೈ 1, 2022
25 °C

ಭಾರತದ ಸ್ವತಂತ್ರ ವಿದೇಶಿ ನೀತಿ ಬಗ್ಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಮೆಚ್ಚುಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್: ಭಾರತದ ಸ್ವತಂತ್ರ ವಿದೇಶಾಂಗ ನೀತಿಗಳ ಬಗ್ಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಮುಕ್ತಕಂಠದಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ರಷ್ಯಾ ಮೇಲೆ ಅಮೆರಿಕದ ಕಠಿಣ ನಿರ್ಬಂಧಗಳ ಹೊರತಾಗಿಯೂ, ರಷ್ಯಾದಿಂದ ಭಾರತ ಕಚ್ಚಾತೈಲವನ್ನು ಆಮದು ಮಾಡಿಕೊಂಡಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಕಟು ಟೀಕಾಕಾರರಾಗಿರುವ ಇಮ್ರಾನ್ ಖಾನ್ ಅವರು, ಇದೀಗ ಭಾರತದ ನೀತಿಗಳ ಬಗ್ಗೆ ಶ್ಲಾಘಿಸಿದ್ದಾರೆ.

ಭಾನುವಾರ ಖೈಬರ್-ಪಖ್ತುಂಖ್ವಾ ಪ್ರಾಂತ್ಯದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತವು ಅಮೆರಿಕ ಸೇರಿ ಇತರ ದೇಶಗಳಿರುವ ಕ್ವಾಡ್ ಒಕ್ಕೂಟದ ಭಾಗವಾಗಿದೆ. ಆದರೆ ರಷ್ಯಾ ಮೇಲಿನ ಅಮೆರಿಕದ ನಿರ್ಬಂಧ ಇದ್ದಾಗ್ಯೂ, ಕಚ್ಚಾತೈಲ ತರಿಸಿಕೊಂಡಿದೆ. ಅದೇ ರೀತಿ ತಮ್ಮ ವಿದೇಶಾಂಗ ನೀತಿಯು ಪಾಕಿಸ್ತಾನದ ಜನತೆ ಪರವಾಗಿದೆ ಎಂದು ಹೇಳಿದರು. 

‘ನಾನು ಯಾರಿಗೂ ತಲೆ ತಗ್ಗಿಸಿಲ್ಲ. ಜತೆಗೆ ದೇಶವನ್ನು ತಲೆ ತಗ್ಗಿಸಲು ಬಿಡುವುದಿಲ್ಲ’ ಎಂದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು