ಸೋಮವಾರ, ನವೆಂಬರ್ 30, 2020
24 °C

ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್

ಪಿಟಿಐ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌: ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರ ದೀಪಾವಳಿಯ ಶುಭಾಶಯ ಕೋರಿದ್ದಾರೆ.

ಟ್ವಿಟರ್‌ ಮೂಲಕ ಸರಳ ಸಂದೇಶವೊಂದನ್ನು ಪ್ರಕಟಿಸಿರುವ ಖಾನ್‌ ಶುಭಕಾಮನೆ ವ್ಯಕ್ತಪಡಿಸಿದ್ದಾರೆ.

'ದೇಶದ ಹಿಂದೂಗಳಿಗೆಲ್ಲ ದೀಪಾವಳಿಯ ಶುಭಾಶಯಗಳು' ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

'ಹಿಂದೂಗಳು ದೇಶದಾದ್ಯಂತ ದೀಪಾವಳಿಯನ್ನು ಉತ್ಸಾಹದಿಂದ ಆಚರಿಸುತ್ತಿದ್ದಾರೆ. ಮನೆಗಳು ಮತ್ತು ದೇವಾಲಯಗಳನ್ನು ವರ್ಣರಂಜಿತ ದೀಪಗಳಿಂದ ಅಲಂಕರಿಸಲಾಗಿದೆ. ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯಲಿದ್ದು, ಜನ ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಲಿದ್ದಾರೆ,' ಎಂದು ಅಲ್ಲಿನ ಸುದ್ದಿ ಮಾಧ್ಯಮ 'ಜಿಯೊ ನ್ಯೂಸ್‌' ವರದಿ ಮಾಡಿದೆ.

ಕರಾಚಿ, ಲಾಹೋರ್ ಮಾತ್ರವಲ್ಲದೇ, ಮಾಟಿಯಾರಿ, ಟ್ಯಾಂಡೋ ಅಲ್ಲಾಹಾರ್, ತಾಂಡೋ ಮುಹಮ್ಮದ್ ಖಾನ್, ಜಮ್‌ಶೊರೊ, ಬಾದಿನ್, ಸಂಘರ್, ಹಾಲಾ, ತಾಂಡೋ ಆಡಮ್ ಮತ್ತು ಶಹಾದ್‌ಪುರಗಳಲ್ಲಿ ದೀಪಾವಳಿ ಉತ್ಸವಗಳು ವಿಜೃಂಭಣೆಯಿಂದ ನಡೆಯುತ್ತವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಹಿಂದೂಗಳು ಪಾಕಿಸ್ತಾನದ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯ. ಅಧಿಕೃತ ಅಂದಾಜಿನ ಪ್ರಕಾರ, 75 ಲಕ್ಷ ಹಿಂದೂಗಳು ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾರೆ. ಆದರೆ, 90 ಲಕ್ಷಕ್ಕೂ ಹೆಚ್ಚು ಹಿಂದೂಗಳು ಪಾಕಿಸ್ತಾನದಲ್ಲಿ ಇರುವುದಾಗಿ ಸಮುದಾಯದ ಪ್ರಮುಖರು ಅಂದಾಜಿಸುತ್ತಾರೆ.

ಪಾಕಿಸ್ತಾನದ ಬಹುಪಾಲು ಹಿಂದೂಗಳು ಸಿಂಧ್ ಪ್ರಾಂತ್ಯದಲ್ಲಿ ನೆಲೆಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು