ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ ಪೊಲೀಸರಿಂದ 9 ಉಗ್ರರ ಬಂಧನ

Last Updated 2 ಜುಲೈ 2022, 15:17 IST
ಅಕ್ಷರ ಗಾತ್ರ

ಲಾಹೋರ್‌: ಪಂಜಾಬ್‌ ಪ್ರಾಂತ್ಯದ ವಿವಿಧೆಡೆ ಪೊಲೀಸರು ದಾಳಿ ನಡೆಸಿ ಇಸ್ಲಾಮಿಕ್‌ ಸ್ಟೇಟ್‌ ಉಗ್ರರ ಗುಂಪಿನ ನಾಲ್ವರು ಸೇರಿದಂತೆ 9 ಭಯೋತ್ಪಾದಕರನ್ನು ಪಾಕಿಸ್ತಾನದ ಪೊಲೀಸರು ಬಂಧಿಸಿದ್ದಾರೆ.

ಸುಳಿವು ಆಧರಿಸಿ ಭಯೋತ್ಪಾದನಾ ನಿಗ್ರಹ ವಿಭಾಗ (ಸಿಟಿಡಿ) ಪೊಲೀಸರು ದಾಳಿ ನಡೆಸಿ 9 ಉಗ್ರರನ್ನು ಬಂಧಿಸಿದ್ದು, ಈ ಪೈಕಿ ಹಲವರು ನಿಷೇಧಿತ ಸಂಘಟನೆಗಳಾದ ತೆಹ್ರೀಕ್–ಎ–ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಜತೆ ನಿಕಟ ಸಂಪರ್ಕ ಹೊಂದಿದ್ದಾರೆ. ಒಬ್ಬ ಲಷ್ಕರ್ ಎ ಜಾಂಗ್ವಿ ಸಂಘಟನೆ ಸದಸ್ಯ. ಹೆಚ್ಚಿನ ತನಿಖೆಗಾಗಿ ಅಜ್ಞಾತ ಸ್ಥಳಕ್ಕೆ ಎಲ್ಲರನ್ನು ಸ್ಥಳಾಂತರಿಸಲಾಗಿದೆ. ಬಂಧಿತರಿಂದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವಾರ ಸಿಟಿಡಿ ಪೊಲೀಸರು ಟಿಟಿಪಿಗೆ ಸೇರಿದ 11 ಉಗ್ರರನ್ನು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT