ಕರಾಚಿ: ಪಾಕಿಸ್ತಾನದ ಕರಾಚಿಯ ಪೊಲೀಸ್ ಕೇಂದ್ರ ಕಚೇರಿ ಮೇಲೆ ದಾಳಿ ಮಾಡಿದ್ದ ತೆಹ್ರಿಕ್ ಇ ತಾಲಿಬಾನ್(ಪಾಕಿಸ್ತಾನ) ಉಗ್ರಗಾಮಿ ಸಂಘಟನೆಯ 4 ಮಂದಿ ಶಸ್ತ್ರಸಜ್ಜಿತ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಸತತ 4 ಗಂಟೆ ಕಾರ್ಯಾಚರಣೆ ಬಳಿಕ ಶುಕ್ರವಾರ ರಾತ್ರಿ 10.30ರ ಸುಮಾರಿಗೆ 5 ಅಂತಸ್ತಿನ ಕೇಂದ್ರ ಕಚೇರಿ ಮೇಲೆ ಮತ್ತೆ ನಿಯಂತ್ರಣ ಸಾಧಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಈ ಕಾಳಗದಲ್ಲಿ ಇಬ್ಬರು ಕಾನ್‌ಸ್ಟೇಬಲ್, ಒಬ್ಬ ಅಧಿಕಾರಿ ಮತ್ತು ಒಬ್ಬ ನಾಗರಿಕ ಸಹ ಮೃತಪಟ್ಟಿದ್ದಾರೆ. ಟಿಟಿಪಿ ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ಭಾರಿ ಗುಂಡಿನ ಕಾಳಗ ನಡೆದಿದೆ.
ಕಾರ್ಯಾಚರಣೆ ವೇಳೆ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಯ ಹಿರಿಯ ಅಧಿಕಾರಿ ಹೇಳಿದ್ದಾರೆ.
ಇಬ್ಬರು ಉಗ್ರರನ್ನು ಸುದೀರ್ಘ ಗುಂಡಿನ ಕಾಳಗದಲ್ಲಿ ಹತ್ಯೆ ಮಾಡಲಾಗಿದ್ದು, ಇಬ್ಬರು ತಮ್ಮನ್ನೇ ತಾವು ಸ್ಫೋಟಿಸಿಕೊಂಡಿದ್ದಾರೆ. ಇದರಿಂದ ಕಟ್ಟಡಕ್ಕೆ ಹಾನಿಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.