ಶನಿವಾರ, ಆಗಸ್ಟ್ 13, 2022
25 °C

ಮುಂಬೈ ದಾಳಿ ಸಂಚುಕೋರನಿಗೆ 15 ವರ್ಷ ಜೈಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಾಹೋರ್‌: ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿ 2008ರ ಮುಂಬೈ ದಾಳಿಯ ಪ್ರಮುಖ ಸಂಚುಕೋರ ಸಾಜಿದ್‌ ಮಜೀದ್‌ ಮೀರ್‌ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು 15 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಈತ ಮೃತಪಟ್ಟಿದ್ದಾನೆ ಎಂದು ಈ ಹಿಂದೆ ಪಾಕಿಸ್ತಾನವು ಘೋಷಿಸಿತ್ತು. ಉಗ್ರರಿಗೆ ಹಣ ಪೂರೈಸುವುದರ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಕಾರ್ಯಪಡೆಯ (ಎಫ್‌ಎಟಿಎಫ್‌) ‘ಬೂದುಪಟ್ಟಿ’ಯಿಂದ ಹೊರಬರುವ ನಿಟ್ಟಿನಲ್ಲಿ ಪಾಕಿಸ್ತಾನವು ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

ಲಷ್ಕರ್‌– ಎ– ತಯಬಾ ಸಂಘಟನೆಯ ಸಾಜಿದ್‌ ಮಜೀದ್‌ಗೆ ಲಾಹೋರ್‌ನ ನ್ಯಾಯಾಲಯವು ಈ ತಿಂಗಳ ಆರಂಭದಲ್ಲಿ ಜೈಲು ಶಿಕ್ಷೆ ವಿಧಿಸಿದೆ ಎಂದು ಪಾಕಿಸ್ತಾನದ ಹಿರಿಯ ವಕೀಲರೊಬ್ಬರು ತಿಳಿಸಿದ್ದಾರೆ.

ಬಿಗಿ ಭದ್ರತೆಯ ಜೈಲಿನಲ್ಲಿ ನ್ಯಾಯಾಲಯದ ಕಲಾಪಗಳು ನಡೆದಿದೆ. ಈ ಕಾರಣಕ್ಕೆ ಮಾಧ್ಯಮಗಳಿಗೆ ಪ್ರವೇಶ ನೀಡಿರಲಿಲ್ಲ ಎಂದೂ ತಿಳಿಸಿದ್ದಾರೆ.

ಏಪ್ರಿಲ್‌ನಲ್ಲಿ ಬಂಧನಕ್ಕೊಳಗಾದ ಬಳಿಕ ಸಾಜಿದ್‌ ಮಜೀದ್‌ ಲಾಹೋರ್‌ನ ಕೋಟ್‌ ಲಖ್‌ಪತ್‌ ಜೈಲಿನಲ್ಲಿದ್ದಾನೆ. ನ್ಯಾಯಾಲಯವು ಆತನಿಗೆ ₹ 4 ಲಕ್ಷ ದಂಡವನ್ನೂ ವಿಧಿಸಿದೆ ಎಂದಿದ್ದಾರೆ.

ಪಂಜಾಬ್‌ ಪೊಲೀಸ್‌ನ ಭಯೋತ್ಪಾದನಾ ನಿಗ್ರಹ ಇಲಾಖೆಯು (ಸಿಟಿಡಿ) ಇಂತಹ ಪ್ರಕರಣಗಳ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡುತ್ತಿದೆ. ಆದರೆ ಸಾಜಿದ್‌ ಮಜೀದ್‌ನ ಶಿಕ್ಷೆಯ ಮಾಹಿತಿಯನ್ನು ಮುಚ್ಚಿಟ್ಟಿತ್ತು.

ಪ್ಯಾರಿಸ್‌ನ ಎಫ್‌ಎಟಿಎಫ್‌ ಅಧಿಕಾರಿಗಳು ಪರಿಶೀಲನೆಗಾಗಿ ಇಸ್ಲಾಮಾಬಾದ್‌ಗೆ ಭೇಟಿ ನೀಡಲಿದ್ದು, ಈ ಕಾರಣಕ್ಕೆ ಸಾಜಿದ್‌ ಮಜೀದ್‌ನ ಶಿಕ್ಷೆಯ ವಿಚಾರವನ್ನು ಬಹಿರಂಗಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು