ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಪುನರ್ ವಿಂಗಡಣೆ ವರದಿಗೆ ಪಾಕಿಸ್ತಾನ ಆಕ್ಷೇಪ

Last Updated 6 ಮೇ 2022, 11:50 IST
ಅಕ್ಷರ ಗಾತ್ರ

ಇಸ್ಲಾಮಾಬಾದ್(ಪಿಟಿಐ): ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರ ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆಗೆ ಸಂಬಂಧಿಸಿದ ಆಯೋಗದ ವರದಿಯನ್ನು ಪಾಕಿಸ್ತಾನ ತಿರಸ್ಕರಿಸಿದೆ.

ಆದರೆ ಗುರುವಾರ ಭಾರತದ ರಾಯಭಾರಿ ಅಧಿಕಾರಿಯನ್ನು ಕರೆಸಿಕೊಂಡ ಪಾಕಿಸ್ತಾನದ ವಿದೇಶಾಂಗ ಕಾರ್ಯಾಲಯ, 'ಕ್ಷೇತ್ರ ಪುನರ್ ವಿಂಗಡಣೆ ಆಯೋಗವು, ಜಮ್ಮು-ಕಾಶ್ಮೀರದಲ್ಲಿನ ಮುಸ್ಲಿಂ ಸಮುದಾಯದ ಹಕ್ಕು ನಿರಾಕರಣೆ ಮತ್ತು ಬಲಹೀನಗೊಳಿಸುವ ಗುರಿಯನ್ನು ಹೊಂದಿದೆ' ಎಂದು ಆರೋಪಿಸಿದೆ. ಅಲ್ಲದೆ ಜಮ್ಮು-ಕಾಶ್ಮೀರದ ಕ್ಷೇತ್ರ ಪುನರ್ ವಿಂಗಡಣೆ ಆಯೋಗದ ವರದಿಯನ್ನು ನಿರಾಕರಿಸುವುದಾಗಿ ಹೇಳಿದೆ.

ನ್ಯಾ. ರಂಜನಾ ದೇಸಾಯಿ ನೇತೃತ್ವದ ಮೂವರು ಸದಸ್ಯರ ಪುನರ್ ವಿಂಗಡಣೆ ಆಯೋಗವು, ಜಮ್ಮು-ಕಾಶ್ಮೀರದ ಕ್ಷೇತ್ರಗಳ ಪುನರ್ ವಿಂಗಡಣೆಗೆ ಸಂಬಂಧಿಸಿದ ಆದೇಶಕ್ಕೆ ಅಂಕಿತ ಹಾಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT