ಭಾನುವಾರ, ಸೆಪ್ಟೆಂಬರ್ 19, 2021
23 °C
ಭಾರತದಿಂದ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

ಕಾಶ್ಮೀರ: ಪಾಕ್‌ನಿಂದ ದಾಖಲೆಗಳ ಬಿಡುಗಡೆ, ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಜಮ್ಮು–ಕಾಶ್ಮೀರಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಒಳಗೊಂಡ ದಾಖಲೆಗಳನ್ನು ಪಾಕಿಸ್ತಾನ ಭಾನುವಾರ ಬಿಡುಗಡೆ ಮಾಡಿದೆ.

‘ಭಾರತದ ಅಧಿಕಾರಿಗಳಿಂದ ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ’ ಎಂದು ಆರೋಪಿಸಿರುವ ಪಾಕಿಸ್ತಾನ, ತಾನು ಬಿಡುಗಡೆ ಮಾಡಿರುವ ದಾಖಲೆಗಳು ಈ ಕುರಿತ ವಿವರಗಳನ್ನು ಒಳಗೊಂಡಿವೆ ಎಂದು ತಿಳಿಸಿದೆ.

ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ಸಚಿವ ಶಾ ಮಹಮೂದ್‌ ಖುರೇಷಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಮೊಯಿದ್‌ ಯೂಸಫ್‌ ಹಾಗೂ ಮಾನವ ಹಕ್ಕುಗಳ ಸಚಿವ ಶಿರಿನ್‌ ಮಝಾರಿ ಅವರು 131 ಪುಟಗಳ ಈ ದಾಖಲೆಯನ್ನು ಬಿಡುಗಡೆ ಮಾಡಿದರು.

‘ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟವಾಗಿರುವ 26 ವರದಿಗಳು, ಭಾರತದ 41 ಹಾಗೂ ಪಾಕಿಸ್ತಾನದ 14 ಚಿಂತಕರ ಅಭಿಪ್ರಾಯಗಳನ್ನು ಈ ದಾಖಲೆ ಒಳಗೊಂಡಿದೆ’ ಎಂದು ಸಚಿವ ಖುರೇಷಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು