ಮಂಗಳವಾರ, ಮಾರ್ಚ್ 21, 2023
29 °C

ಪ್ರವಾಹದಿಂದ ತತ್ತರ; ₹ 65 ಸಾವಿರ ಕೋಟಿ ನೆರವಿನ ನಿರೀಕ್ಷೆಯಲ್ಲಿ ಪಾಕ್: ಷರೀಫ್

ರಾಯಿಟರ್ಸ್‌‌‌ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌: ಪಾಕಿಸ್ತಾನವು ಕಳೆದ ವರ್ಷ ಸಂಭವಿಸಿದ ಭೀಕರ ಪ್ರವಾಹದಿಂದ ತತ್ತರಿಸಿದೆ. ಇದರಿಂದ ಚೇತರಿಸಿಕೊಳ್ಳಲು ಮುಂದಿನ ಮೂರು ವರ್ಷಗಳಲ್ಲಿ ತನ್ನ ಅಂತರರಾಷ್ಟ್ರೀಯ ಪಾಲುದಾರ ರಾಷ್ಟ್ರಗಳಿಂದ ₹ 65 ಸಾವಿರ ಕೋಟಿ (8 ಬಿಲಿಯನ್ ಡಾಲರ್) ನೆರವು ನಿರೀಕ್ಷಿಸುತ್ತಿರುವುದಾಗಿ ಪ್ರಧಾನಿ ಶಹಬಾಜ್ ಷರೀಫ್ ಜಿನಿವಾದಲ್ಲಿ ಸೋಮವಾರ ಹೇಳಿದ್ದಾರೆ.

ಹವಾಮಾನ ವೈಪರೀತ್ಯಕ್ಕೆ ಕಾರಣವಾದ ಪ್ರವಾಹವು ಪಾಕಿಸ್ತಾನ ಆರ್ಥಿಕತೆಗೆ ಭಾರಿ ಹೊಡೆತ ನೀಡಿದೆ. ಪ್ರವಾಹ ಸಂದರ್ಭದಲ್ಲಿ ಸುಮಾರು 80 ಲಕ್ಷ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ಕನಿಷ್ಠ 1,700 ಮಂದಿ ಮೃತಪಟ್ಟಿದ್ದಾರೆ. ಪುನರ್ನಿಮಾಣ ಕಾರ್ಯಗಳಿಗೆ ಅಂದಾಜು ₹ 1.31 ಲಕ್ಷ ಕೋಟಿ (16 ಬಿಲಿಯನ್ ಡಾಲರ್) ವೆಚ್ಚವನ್ನು ಅಂದಾಜಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು