ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನದ ನೆರೆ ರಾಷ್ಟ್ರಗಳೊಂದಿಗೆ ಪಾಕಿಸ್ತಾನ ವರ್ಚುವಲ್‌ ಸಭೆ

Last Updated 8 ಸೆಪ್ಟೆಂಬರ್ 2021, 8:38 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಅಫ್ಗಾನಿಸ್ತಾನದಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚಿಸಲು ಅದರ ನೆರೆ ರಾಷ್ಟ್ರಗಳ ವಿದೇಶಾಂಗ ಸಚಿವರ ವರ್ಚುವಲ್‌ ಸಭೆಯನ್ನು ಪಾಕಿಸ್ತಾನ ಬುಧವಾರ ಆಯೋಜಿಸಿದೆ.

‘ಚೀನಾ, ಇರಾನ್‌, ತಜಕಿಸ್ತಾನ, ತುರ್ಕಮೆನಿಸ್ತಾನ ಮತ್ತು ಉಜ್ಬೇಕಿಸ್ತಾನದ ವಿದೇಶಾಂಗ ಸಚಿವರು ಈ ಸಭೆಯಲ್ಲಿ ಭಾಗಿಯಾಗಲಿದ್ದು, ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್‌ ಖುರೇಷಿ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ವಿದೇಶಾಂಗ ಕಚೇರಿ ಹೇಳಿದೆ.

ಪಾಕಿಸ್ತಾನದ ಆಹ್ವಾನದ ಮೇರೆಗೆ ಅಫ್ಗಾನಿಸ್ತಾನದ ಪರಿಸ್ಥಿತಿಯ ಕುರಿತಾಗಿ ವಿದೇಶಾಂಗ ಸಚಿವರುಗಳ ಸಭೆಯನ್ನು ನಡೆಸಲಾಗುತ್ತಿದೆ.

‘ಪ್ರಾದೇಶಿಕ ಸ್ಥಿರತೆ, ಸವಾಲುಗಳು, ಸಮೃದ್ದಿ, ಉದಯೋನ್ಮುಖ ಅವಕಾಶಗಳ ಬಗ್ಗೆ ಅರಿತುಕೊಳ್ಳುವ ನಿಟ್ಟಿನಲ್ಲಿ ಅಫ್ಗಾನಿಸ್ತಾನದಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಈ ಸಭೆಯಲ್ಲಿ ಪರಿಶೀಲಿಸಲಾಗುವುದು. ಶಾಂತಿಯುತ ಮತ್ತು ಸ್ಥಿರವಾದ ಅಫ್ಗಾನಿಸ್ತಾನ ರೂಪಿಸಲು ನೆರೆರಾಷ್ಟ್ರಗಳಿಗೆ ಜತೆಯಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸುವುದೇ ಈ ಸಭೆಯ ಮೂಲ ಉದ್ದೇಶ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT