ಕದನ ವಿರಾಮ ಉಲ್ಲಂಘನೆ: ಪಾಕ್ ಆಕ್ಷೇಪ

ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರತೀಯ ಸೇನೆಯು ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿರುವ ಪಾಕಿಸ್ತಾನವು ಭಾರತದ ಹೈ ಕಮಿಷನ್‌ನ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಭಾನುವಾರ ಕರೆಯಿಸಿಕೊಂಡು ಪ್ರತಿಭಟನೆ ದಾಖಲಿಸಿದೆ.
ಭಾರತೀಯ ಸೇನೆಯು ರಾಖ್ಚಿಕ್ರಿ ವಲಯದಲ್ಲಿ ಶನಿವಾರ ರಾತ್ರಿ ಅಪ್ರಚೋದಿತ ದಾಳಿ ನಡೆಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯವು ಹೇಳಿಕೆ ಬಿಡುಗಡೆ ಮಾಡಿದೆ.
‘ಭಾರತೀಯ ಸೇನೆಯು ಗಡಿ ನಿಯಂತ್ರಣ ರೇಖೆ ಬಳಿ ಇರುವ ಗ್ರಾಮಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ವರ್ಷ ಭಾರತವು 2,225 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಇದರಲ್ಲಿ 18 ಮಂದಿ ಮೃತಪಟ್ಟಿದ್ದಾರೆ’ ಎಂದು ಪಾಕಿಸ್ತಾನ ಆರೋಪಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.