ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಟೋಬರ್‌ ವೇಳೆಗೆ ಪಾಕ್‌ ಚುನಾವಣೆ ಸಾಧ್ಯತೆ

Last Updated 4 ಆಗಸ್ಟ್ 2022, 15:24 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಈ ವರ್ಷದ ಅಕ್ಟೋಬರ್‌ ವೇಳೆಗೆ ಸಾರ್ವತ್ರಿಕ ಚುನಾವಣೆ ನಡೆಸಲು ಪಾಕಿಸ್ತಾನ ಚುನಾವಣಾ ಆಯೋಗವು ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ ಎಂದು ಮಾಧ್ಯಮವೊಂದು ಗುರುವಾರ ವರದಿ ಮಾಡಿದೆ.

‘ನಿಗದಿಗಿಂತಲೂ ಒಂದು ವರ್ಷ ಮುಂಚಿತವಾಗಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ. ಇದಕ್ಕೆ ಪೂರಕವೆಂಬಂತೆ ಕ್ಷೇತ್ರಗಳ ವಿಂಗಡಣೆ ಕಾರ್ಯ ಪೂರ್ಣಗೊಳಿಸಿದೆ’ ಎಂದು ದಿ ಎಕ್ಸ್‌ಪ್ರೆಸ್‌ ಟ್ರಿಬ್ಯೂನಲ್‌ ಪತ್ರಿಕೆ ವರದಿಯಲ್ಲಿ ಉಲ್ಲೇಖಿಸಿದೆ.

ಆಗಸ್ಟ್‌ 4ರೊಳಗೆ ಕ್ಷೇತ್ರ ವಿಂಗಡಣೆ ಕಾರ್ಯ ಮುಗಿಸುವುದಾಗಿ ಆಯೋಗವು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು.

‘ಆಯೋಗವು ಈ ತಿಂಗಳ ಅಂತ್ಯದೊಳಗೆ ಮತದಾರರ ಹಾಗೂ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT