ಅತ್ಯಾಧುನಿಕ ತಂತ್ರಜ್ಞಾನ 5ಜಿ ಆರಂಭಿಸಲು ಪಾಕ್ ಸಿದ್ಧತೆ

ಇಸ್ಲಾಮಾಬಾದ್: ಪಾಕಿಸ್ತಾನವು 2022–23ರಲ್ಲಿ ಅತ್ಯಾಧುನಿಕವಾದ 5ಜಿ ಇಂಟರ್ನೆಟ್ ನೆಟ್ವರ್ಕ್ ಅನ್ನು ಪರಿಚಯಿಸಲು ಯೋಜನೆ ರೂಪಿಸಿದೆ. ಇದು ಡೌನ್ಲೋಡ್ ವೇಗವನ್ನು 10 ಪಟ್ಟು ಹೆಚ್ಚಿಸಲಿದೆ. ಅಲ್ಲದೆ ದೇಶದ ಆರ್ಥಿಕ ಚಟುವಟಿಕೆಯನ್ನು ಇನ್ನಷ್ಟು ವಿಸ್ತರಿಸಲು ನೆರವಾಗಲಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.
‘5ಜಿ ತಂತ್ರಜ್ಞಾನ ಪರಿಚಯಿಸಲು ಪಾಕಿಸ್ತಾನ ಸಮಗ್ರ ಯೋಜನೆ ಅಭಿವೃದ್ಧಿಪಡಿಸುತ್ತಿದೆ’ ಎಂದು ಪಾಕಿಸ್ತಾನ ದೂರಸಂಪರ್ಕ ಪ್ರಾಧಿಕಾರವು ತನ್ನ ವಾರ್ಷಿಕ ವರದಿಯಲ್ಲಿ ಪ್ರಸ್ತಾಪಿಸಿದೆ.
‘ಪಾಕಿಸ್ತಾನದಲ್ಲಿ ಕೋವಿಡ್ ಬಿಕ್ಕಟ್ಟಿನ ವೇಳೆಯಲ್ಲಿ ಡಿಜಿಟಲ್ ಆರ್ಥಿಕತೆ ವಿಸ್ತರಿಸಿದೆ. ಹಾಗಾಗಿ ಡಿಜಿಟಲ್ ಆರ್ಥಿಕತೆಯನ್ನು ಇನ್ನಷ್ಟು ಹೆಚ್ಚಿಸಲು ಬೇಕಾದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ನಿಯಂತ್ರಕರು ಮತ್ತು ಭಾಗೀದಾರರು ನಿರ್ಧರಿಸಿದ್ದಾರೆ’ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.